ಬಿಹಾರದಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ : ಧರ್ಮೇಂದ್ರ ಪ್ರಧಾನ್
ಪಾಟ್ನಾ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ ಬೆಳಿಗ್ಗೆ 7 ಗಂಟೆಗೆ ಆರಂಭವಾಗಲಿದ್ದು, 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮತದಾನ ಪ್ರಾರಂಭಕ್ಕೂ ಮುನ್ನವೇ ಬಿಜೆಪಿ ಬಿಹಾರ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ
Pradan


ಪಾಟ್ನಾ, 10 ನವೆಂಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ ಬೆಳಿಗ್ಗೆ 7 ಗಂಟೆಗೆ ಆರಂಭವಾಗಲಿದ್ದು, 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮತದಾನ ಪ್ರಾರಂಭಕ್ಕೂ ಮುನ್ನವೇ ಬಿಜೆಪಿ ಬಿಹಾರ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು “ಎನ್‌ಡಿಎ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನ್ , “ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಯ ವಿಚಾರಗಳಲ್ಲಿ ಯುವ ಮತದಾರರು ಹಾಗೂ ಮಹಿಳೆಯರು ಒಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅನುಭವವು ಬಿಹಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬ ನಂಬಿಕೆ ಜನರಲ್ಲಿ ಇದೆ,” ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande