ಹುಲಿಗಿ : ಹಾಡಿರೇ ರಾಗಗಳ ತೂಗಿರೇ
ಹುಲಿಗಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ.11 ರಂದು ಸಂಜೆ 5 ಗಂಟೆಗೆ ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ಹಾಡಿರೇ ರಾಗಗಳ ತೂಗಿರೇ ದೀಪಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕ
ಹುಲಿಗಿ : ಹಾಡಿರೇ ರಾಗಗಳ ತೂಗಿರೇ


ಹುಲಿಗಿ, 10 ನವೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ.11 ರಂದು ಸಂಜೆ 5 ಗಂಟೆಗೆ ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ಹಾಡಿರೇ ರಾಗಗಳ ತೂಗಿರೇ ದೀಪಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಉದ್ಘಾಟಿಸುವರು, ಕರ್ನಾಟಕ ವಿಧಾನ ಸಭೆ ಪ್ರತಿ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು.

ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬೀಸಾಬ ದೋಟಿಹಾಳ ಹಾಗೂ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಹುಲಿಗಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಮ್ಮ ಗವಿಸಿದ್ದಪ್ಪ ಗುಂಗಾಡಿ, ವಸತಿ ಇಲಾಖೆ, ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಕೃಷ್ಣಾ ಮೇಲ್ದಂಡೆ ಯೋಜನೆಯ ಆಯುಕ್ತರು, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್ ಅವರು ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಕಲಬುರಗಿ ವಲಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಶ್ರೀ ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಯಂ. ಹೆಚ್. ಪ್ರಕಾಶ್ ರಾವ್ ಅವರು ಭಾಗವಹಿಸುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಕಾಡೆಮಿಗಳ ಸದಸ್ಯರು, ಡಾ.ಸಿದ್ದಯ್ಯ ಪುರಾಣಿಕ ಟ್ರಸ್ಟ್ ಅಧ್ಯಕ್ಷರು ಹಾಗೂ ನಾಮನಿರ್ದೇಶಿತ ಸದಸ್ಯರು, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸರ್ವ ಸದಸ್ಯರು ಹಾಗೂ ಹುಲಿಗಿ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande