72 ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ಧ್ಯೇಯ: ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು
ಗದಗ, 12 ನವೆಂಬರ್ (ಹಿ.ಸ.) ಆ್ಯಂಕರ್:- ಪ್ರತಿ ವರ್ಷದಂತೆ ಈ ವರ್ಷವೂ ಸಹ 72 ನೇ ಅಖಿಲ ಭಾರತ ಸಪ್ತಾಹವನ್ನು 2025 ನವೆಂಬರ್ 14 ರಿಂದ 20 ರವೆಗೆ ದೇಶವ್ಯಾಪಿ ಆಚರಿಸಲಾಗುತ್ತಿದೆ. ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ ಕೆ.ಸಿ.ಸಿ
ಫೋಟೋ


ಗದಗ, 12 ನವೆಂಬರ್ (ಹಿ.ಸ.)

ಆ್ಯಂಕರ್:- ಪ್ರತಿ ವರ್ಷದಂತೆ ಈ ವರ್ಷವೂ ಸಹ 72 ನೇ ಅಖಿಲ ಭಾರತ ಸಪ್ತಾಹವನ್ನು 2025 ನವೆಂಬರ್ 14 ರಿಂದ 20 ರವೆಗೆ ದೇಶವ್ಯಾಪಿ ಆಚರಿಸಲಾಗುತ್ತಿದೆ.

ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ ಕೆ.ಸಿ.ಸಿ. ಬ್ಯಾಂಕ್ ಲಿ., ಧಾರವಾಡ ಕೆ.ಎಂ.ಎಫ್ ಧಾರವಾಡ, ಗದಗ ಉಪವಿಭಾಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಸಂಭಾಪೂರ ಹಾಗೂ ಗದಗ ತಾಲೂಕಿನ ಎಲ್ಲಾ ಸಹಕಾರ ಸಂಘ/ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ “ಕಾರ್ಯದಕ್ಷತೆ ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದು” ಪ್ರಾರಂಭ ದಿನದ ಕಾರ್ಯಕ್ರಮವನ್ನು ದಿನಾಂಕ: 14.11.2025 ಶುಕ್ರವಾರ ರಂದು ಬೆಳಿಗ್ಗೆ 8.00 ಗಂಟೆಗೆ ಗದಗ ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷ ಸಿ. ಎಂ. ಪಾಟೀಲರವರು ನಗರದ ಟ್ಯಾಗೋರ್ ರೋಡ್‌ದಲ್ಲಿನ ಗದಗ ಜಿಲ್ಲಾ ಸಹಕಾರ ಯೂನಿಯನ್ನಿನ ಆವರಣದಲ್ಲಿ ಸಹಕಾರ ಧ್ವಜಾರೊಹಣ ಮಾಡಲಿದ್ದಾರೆ.

ನವೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯದಕ್ಷತೆ ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದು ಈ ವಿಷಯದ ಕುರಿತು ಕಾರ್ಯಕ್ರಮವನ್ನು ದುರ್ಗಾದೇವಿ ಸಮುದಾಯಭವನ ಸಂಭಾಪುರ ಇಲ್ಲಿ ಹಮ್ಮಿಕೊಳ್ಳಲಾಗಿದೆ. ನವೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ತ್ರಿಭುವನ್ ಸಹಕಾರ ವಿಶ್ವ ವಿದ್ಯಾಲಯ: ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ ಕುರಿತು ಕಾರ್ಯಕ್ರಮವನ್ನು ರೋಣ ತಾಲೂಕಿನ ಮಲ್ಲಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ನವೆಂಬರ್ 16 ರಂದು ಬೆಳಿಗ್ಗೆ 10 ಗಂಟೆಗೆ ಸಹಕಾರ ಸಂಸ್ಥೇಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ಕುರಿತು ಕಾರ್ಯಕ್ರಮವನ್ನು ಮರ್ಚಂಟ್ಸ್ ಲಿಬರಲ್ ಕೋ ಆಪ್ ಬ್ಯಾಂಕ್ ಲಿ ಗದಗ ಮಕಾನಗಲ್ಲಿ ಇದರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ನವೆಂಬರ್ 17 ರಂದು ಬೆಳಿಗ್ಗ 11 ಗಂಟೆಗೆ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಇದರ ಸಭಾಭವನದಲ್ಲಿ ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನವೆಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಮುಂಡರಗಿಯಲ್ಲಿನ ಕೆ.ಸಿ.ಸಿ. ಬ್ಯಾಂಕ್ ಲಿಮಿಟಡ್ ಇದರ ಸಭಾಭವನದಲ್ಲಿ ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ ಕರಕುಶಲ, ಕೈಮಗ್ಗ, ಕಾರ್ಮಿಕ, ಮೀನುಗಾರಿಕೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನವೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಗಜೇಂದ್ರಗಡ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಹಾಲಕೆರೆ ಇದರ ಆವರಣದಲ್ಲಿ ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ ಫಾರಂ, ಸಹಕಾರಿ ಸಂಸ್ಥೆಗಳು , ಕಿಚನ್ ಸಹಕಾರ ಸಂಘಗಳು, ಮತ್ತಿತರ ಉದ್ಯೋಯುನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ನರಗುಂದ ತಾಲೂಕಿನ ಹುಣಸೀಕಟ್ಟಿ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande