
ರಾಯಚೂರು, 12 ನವೆಂಬರ್ (ಹಿ.ಸ.)
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾ ಬಾಲ ಭವನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗುತ್ತಿಗೆ ಆಧಾರದ ಮೇಲೆ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ 01 ಹುದ್ದೆಯನ್ನು ಯೋಜನೆ ಜಾರಿಯಲ್ಲಿರುವರೆಗೆ ಮಾತ್ರ ಗುತ್ತಿಗೆ ಕಾರ್ಯನಿವಹಿಸಬೇಕು. ವಿದ್ಯಾರ್ಹತೆ, ಹೆಚ್ಚುವರಿ ಅರ್ಹತೆಗಳು, ಅನುಭವ ಹಾಗೂ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ, ಕಾರ್ಯಗಾರ, ತರಬೇತಿಯನ್ನು ಹಮ್ಮಿಕೊಳ್ಳಲು ಸಮರ್ಥ, ಕೌಶಲ ಹೊಂದಿರುವ, ಗಣಕಯಂತ್ರ ನಿರ್ವಹಣೆಯಲ್ಲಿ ಪರಿಣಿತಿ, ಕನ್ನಡ ಭಾಷೆಯಲ್ಲಿ ಪರಿಪೂರ್ಣ ಹಿಡಿತವುಳ್ಳ ಹಾಗೂ ಕನಿಷ್ಠ 05 ವರ್ಷ ಸೇವಾ ಅನುಭವ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು, ಅನುಭವ, ಕಂಪ್ಯೂಟರ್ ಜ್ಞಾನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಸಂಯೋಜಕರ ಹುದ್ದೆಗೆ ಮಾಸಿಕ 19,223 ರೂ.ಗಳ ಗೌರವಧನ ನೀಡಲಾಗುವುದು.
ದಾಖಲೆಗಳು: ನಿಗದಿತ ನಮೂನೆಯಲ್ಲಿ ಅರ್ಜಿ, ಪದವಿ ಅಂಕ ಪಟ್ಟಿ, ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರಗಳು, ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ, ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರದೊಂದಿಗೆ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಈ ಕಚೇರಿಯಲ್ಲಿ ಪಡೆದು ನವೆಂಬರ್ 20ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅವಧಿ ಮುಗಿದ ನಂತರ ಅಂಚೆ ಮೂಲಕ ಅಥವಾ ನೇರವಾಗಿ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂತ್ರಾಲಯಂ ರಸ್ತೆ, ಐ.ಡಿ.ಎಸ್.ಎಂ.ಟಿ. ಲೇಔಟ್, ರಾಯಚೂರು-584101ಗೆ ಅಥವಾ ದೂರವಾಣಿ ಸಂಖ್ಯೆ: 08532-295646ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್