
ಬಳ್ಳಾರಿ, 12 ನವೆಂಬರ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯ ಹಿನ್ನಲೆಯಲ್ಲಿ ನವೆಂಬರ್ 15 ರಂದು ಪಕ್ಷದ ಇಬ್ಬರು ವೀಕ್ಷಕರ ತಂಡವು ಬಳ್ಳಾರಿಗೆ ಆಗಮಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ತಿಳಿಸಿದ್ದಾರೆ.
ಪತ್ರಕರ್ತರ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಉಪಾಧ್ಯಕ್ಷರಾದ ಆರ್.ವಿ. ವೆಂಕಟೇಶ್ ಮತ್ತು ಸೂರಜ್ ಹೆಗಡೆ ಅವರು ವೀಕ್ಷಕರಾಗಿದ್ದು, ಈ ಹಿನ್ನಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಪಾಲಿಕೆ ಸದಸ್ಯರ ಸರಣಿ ಸಭೆಗಳನ್ನು ನಡೆಸಲಾಗುತ್ತದೆ ಎಂದರು.
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳು `ಸಾಮಾನ್ಯ' ವರ್ಗಕ್ಕೆ ಮೀಸಲಾಗಿವೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್