
ವಿಜಯಪುರ, 12 ನವೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ಅವರ 40 ಪುಟಗಳ ಸಮಗ್ರ ಸಾಹಿತ್ಯ ಲೋಕಾರ್ಪಣೆ ಸಮಾರಂಭ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಭವನದಲ್ಲಿ ನವೆಂಬರ್ 15 ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರಿನ ಕುಂದೂರು ಮಠದ ಡಾ. ಶರತ್‍ಚಂದ್ರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಜರುಗುವ ವಿಚಾರ ಸಂಕಿರಣದಲ್ಲಿ ಡಾ.ವೀರಣ್ಣ ರಾಜೂರ, ಡಾ.ಎಸ್.ಕೆ.ಕೊಪ್ಪಾ, ಡಾ.ಗುರುಪಾದ ಮರಿಗುದ್ದಿ ಡಾ. ಕೆ.ರವೀಂದ್ರನಾಥ, ಡಾ.ಎಫ್.ಟಿ.ಹಳ್ಳಿಕೇರಿ, ಡಾ.ಎಂ.ಎಸ್.ಆಶಾದೇವಿ, ಡಾ.ಹನುಮಾಕ್ಷಿ ಗೋಗಿ ಅವರು ಡಾ.ಕಲ್ಬುರ್ಗಿ ಅವರ ವಿವಿಧ ಸಾಹಿತ್ಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ನಡೆಯುವ ಗ್ರಂಥಗಳ ಲೋಕಾರ್ಪಣೆ ಸಮಾರಂಭದಲ್ಲಿ ಭಾಲ್ಕಿಯ ಹಿರೇಮಠ ಸಂಸ್ಥಾನದ ಶ್ರೀ ಮ.ಘ.ಚ. ಬಸವಲಿಂಗ ಪಟ್ಟದೇವರು ದಿವ್ಯ ಸಾನಿಧ್ಯ ವಹಿಸಲಿದ್ದು, ಮೈಸೂರಿನ ಕುಂದೂರು ಮಠದ ಶ್ರೀ ಡಾ.ಶರತ್‍ಚಂದ್ರ ಸ್ವಾಮಿಗಳ ಸಮ್ಮುಖದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರು ಗ್ರಂಥಗಳ ಲೋಕಾರ್ಪಣೆ ಮಾಡಲಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿಎಲ್‍ಡಿಇ ಸಂಸ್ಥೆ ಅಧ್ಯಕ್ಷ ಎಂ.ಬಿ.ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ ಗ್ರಂಥಗಳ ಸಂಪಾದಕರಿಗೆ ಸನ್ಮಾನ ಮಾಡಲಿದ್ದಾರೆ. ಧಾರವಾಡದ ಶ್ರೀಮತಿ ಉಮಾದೇವಿ ಕಲಬುರ್ಗಿ, ಪ್ರಧಾನ ಸಂಪಾದಕರಾದ ಡಾ.ವೀರಣ್ಣ ರಾಜೂರ ಉಪಸ್ಥಿತರಿರಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande