ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪನೆ:ಸಿದ್ದರಾಮಯ್ಯ
ಬೆಂಗಳೂರು, 12 ನವೆಂಬರ್ (ಹಿ.ಸ.): ಆ್ಯಂಕರ್:ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಗಾಂಧಿನಗರದ
Cm


ಬೆಂಗಳೂರು, 12 ನವೆಂಬರ್ (ಹಿ.ಸ.):

ಆ್ಯಂಕರ್:ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.

ನಾನು ಮೊದಲಿಂದಲೂ ಸನಾತನವಾದಿ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರ್‌ಎಸ್‌ಎಸ್‌ ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು ಆರ್‌ಎಸ್‌ಎಸ್‌ ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande