
ಹೊಸಪೇಟೆ, 12 ನವೆಂಬರ್ (ಹಿ.ಸ.)
ಆ್ಯಂಕರ್ :ಹೊಸಪೇಟೆ ನಗರದ ಚಿತ್ತವಾಡ್ಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗೃಹರಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಟಿ.ಮಂಜುನಾಥ(48) ಕಾಣೆಯಾಗಿದ್ದು ಚಿತ್ತವಾಡ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ : ಸುಮಾರು 5.3 ಅಡಿ ಎತ್ತರ, ಧೃಡವಾದ ಮೈಕಟ್ಟು, ಗೋಧಿ ಮೈಬಣ್ಣ, ಕಾಣೆಯಾಗುವ ಮುಂಚೆ ಖಾಕಿ ಸಮವಸ್ತ್ರ ಧರಿಸಿರುತ್ತಾನೆ ಹಾಗೂ ಕನ್ನಡ, ತೆಲಗು ಮತ್ತು ಹಿಂದಿ ಭಾಷೆ ಯನ್ನು ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮೊ.9480803756 ಗೆ ಅಥವಾ ಚಿತ್ತವಾಡ್ಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್