
ಕೊಪ್ಪಳ , 12 ನವೆಂಬರ್ (ಹಿ.ಸ.)
ಆ್ಯಂಕರ್ : ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಅಳವಂಡಿಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸಿಕೊಳ್ಳುವರು. ಸಭೆಗೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಗೂ ಹಿಂದಿನ ಸಭೆಯ ನಡವಳಿಗಳ ಪ್ರಕಾರ ಅಗತ್ಯ ಮಾಹಿತಿ ಹಾಗೂ ಪಾಲನಾ ವರದಿಯೊಂದಿಗೆ ಖುದ್ದಾಗಿ ಹಾಜರಾಗಬೇಕು.
ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್