ದೆಹಲಿ ಸ್ಫೋಟದ ಸಂತ್ರಸ್ತರನ್ನು ಭೇಟಿಯಾದ ಪ್ರಧಾನಿ ಮೋದಿ
ನವದೆಹಲಿ, 12 ನವೆಂಬರ್ (ಹಿ.ಸ.) ಆ್ಯಂಕರ್: ಎರಡು ದಿನಗಳ ಭೂತಾನ್‌ ಭೇಟಿಯಿಂದ ಹಿಂದಿರುಗಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರ
Pm


ನವದೆಹಲಿ, 12 ನವೆಂಬರ್ (ಹಿ.ಸ.)

ಆ್ಯಂಕರ್:

ಎರಡು ದಿನಗಳ ಭೂತಾನ್‌ ಭೇಟಿಯಿಂದ ಹಿಂದಿರುಗಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಆಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರು ಗಾಯಾಳುಗಳ ಸ್ಥಿತಿಯ ಬಗ್ಗೆ ಅವರಿಗೆ ವಿವರಿಸಿದರು. ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸನಲ್ಲಿ ಫೋಟೋಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ, ಎಲ್‌ಎನ್‌ಜೆಪಿ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದೆ. ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪಿತೂರಿಯ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಎಂದು ಬರೆದಿದ್ದಾರೆ. ಇದಕ್ಕೂ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್‌ನಿಂದ ರಾಷ್ಟ್ರಕ್ಕೆ ಸಂದೇಶ ನೀಡುತ್ತಾ, ಈ ಪಿತೂರಿಯ ಹಿಂದೆ ಯಾರೇ ಇದ್ದರೂ ಅವರನ್ನು ಯಾವುದೇ ಸಂದರ್ಭದಲ್ಲೂ ಬಿಡಲಾಗುವುದಿಲ್ಲ ಎಂದು ಹೇಳಿದ್ದರು. ಭಾರತೀಯ ಸಂಸ್ಥೆಗಳು ಈ ಸಂಪೂರ್ಣ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ ಮತ್ತು ಅಪರಾಧಿಗಳನ್ನು ನ್ಯಾಯದ ಮುಂದೆ ತರಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande