ನವೆಂಬರ್ 14 ರಂದು ಶಾಲಾ ಕಾಲೇಜುಗಳಲ್ಲಿ ಪೋಷಕರು-ಶಿಕ್ಷಕರ ಸಭೆ
ಧಾರವಾಡ, 12 ನವೆಂಬರ್ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರನ್ನು ತಲುಪಲು ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ 2025-26 ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥ
Parents meet


ಧಾರವಾಡ, 12 ನವೆಂಬರ್ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರನ್ನು ತಲುಪಲು ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ 2025-26 ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳು ಎಲ್ಲಾ ಅರ್ಹ ವಯಸ್ಸಿನ ಮಕ್ಕಳಿಗೆ ಒಳಗೊಳ್ಳುವಿಕೆ, ಪ್ರವೇಶಾವಕಾಶ ಮತ್ತು ಸಮಾನತೆಯ ಮೂಲಕ ಶಿಕ್ಷಣವನ್ನು ಒದಗಿಸುತ್ತಿವೆ. ಸರ್ಕಾರಿ ಶಾಲೆ, ಕಾಲೇಜುಗಳು ಎಸ್.ಡಿ.ಎಂ.ಸಿ., ಸಿ.ಡಿ.ಸಿ. ಮತ್ತು ಒಟ್ಟಾರೆ ಸಮುದಾಯದ ಹಿತಾಸಕ್ತಿಗಳ ಫಲಶ್ರುತಿಯಾಗಿವೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಸರ್ಕಾರಿ ಶಾಲಾ-ಕಾಲೇಜುಗಳ ಬಗ್ಗೆ ಪೋಷಕರಲ್ಲಿ ಭರವಸೆಯನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ.

ರಾಷ್ಟ್ರ ನಿರ್ಮಾಣ ಮತ್ತು ಚೈತನ್ಯಶೀಲ ಸಮಾಜ ನಿರ್ಮಾಣದ ಸಾಕಾರಕ್ಕಾಗಿ ಅರ್ಹ ವಯೋಮಾನದ ಎಲ್ಲಾ ಮಕ್ಕಳು ಶಾಲೆಗೆ ದಾಖಲಾಗಿ, ನಿರಂತರವಾಗಿ ಹಾಜರಾಗಿ ಗುಣಮಟ್ಟದ ಶಿಕ್ಷಣ ಪಡೆಯುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.

ಮಕ್ಕಳ ಕಲಿಕೆಯು ಶಾಲೆ, ಮನೆ ಮತ್ತು ಸಮಾಜಗಳ ನಡುವೆ ನಿರಂತರ ಸಂಪರ್ಕವನ್ನು ಕಲ್ಪಿಸುತ್ತದೆ. ಮಕ್ಕಳ ಸವಾರ್ಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು ಅವರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಎಸ್.ಎಸ್.ಕೆಳದಿಮಠ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಸರ್ಕಾರದಿಂದ ಅನುಷ್ಠಾನಗೊಳಿಸಲಾಗಿರುವ ಉಪಕ್ರಮಗಳು, ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಪೋಷಕ-ಶಿಕ್ಷಕ ಸಭೆಗಳ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande