
ಬೆಂಗಳೂರು, 12 ನವೆಂಬರ್ (ಹಿ.ಸ.):
ಆ್ಯಂಕರ್:ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಬಿಹಾರ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮತದಾನೋತ್ತರ ಸಮೀಕ್ಷೆಯಲ್ಲಿ ಹೇಳಲಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೇರಿತು. ಬಿಹಾರದಲ್ಲಿ ಎನ್ ಡಿಎ ಅಧಿಕಾರಕ್ಕೇರಲಿದೆ ಎಂದು ಮತದಾನೋತ್ತರ ಸಮೀಕ್ಷೆ ಹೇಳಿದರೂ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa