
ಹೊಸಪೇಟೆ, 12 ನವೆಂಬರ್ (ಹಿ.ಸ.)
ಆ್ಯಂಕರ್ : ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಪ್ರಾರಂಭವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಿ.ಟಿ.ಮಂಜುನಾಥ್ ಅವರು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೇಳೆ ವಿಮೆ ನೋಂದಾಯಿಸಲು ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕ್‍ಗಳಲ್ಲಿ ವಿಮೆ ಮಾಡಿಸಬೇಕು. ಯೋಜನೆಯಡಿ ಹಿಂಗಾರು ಹಂಗಾಮಿನ ಬೆಳೆಗಳಿಗೆ ನ.15 ಜೋಳ(ಮಳೆಯಾಶ್ರಿತ), ಡಿ.01 ಹುರುಳಿ(ಮಳೆಯಾಶ್ರಿತ), ಈರುಳ್ಳಿ(ನೀರಾವರಿ), ಸೂರ್ಯಕಾಂತಿ(ನೀರಾವರಿ ಮತ್ತು ಮಳೆಯಾಶ್ರಿತ), ಡಿ.15 ಕಡಲೆ(ಮಳೆಯಾಶ್ರಿತ), ಜೋಳ(ನೀರಾವರಿ), ಮೆಕ್ಕೆಜೋಳ(ಮಳೆಯಾಶ್ರಿತ ಮತ್ತು ನೀರಾವರಿ), ಗೋಧಿ(ಮಳೆಯಾಶ್ರಿತ), ಡಿ.31 ರಾಗಿ(ನೀರಾವರಿ), ಕಡಲೆ(ನೀರಾವರಿ)ಗಳಿಗೆ ನಿಗಧಿಪಡಿಸಿದ ದಿನಾಂಕದೊಳಗೆ ವಿಮೆಯನ್ನು ನೋಂದಾಯಿಸಿಕೊಳ್ಳಬೇಕು. ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರಾವರಿ ಆಶ್ರಿತ ಭತ್ತ, ಶೇಂಗಾ, ರಾಗಿ, ಸೂರ್ಯಕಾಂತಿ ಮತ್ತು ಈರುಳ್ಳಿಗಳಿಗೆ 2026 ಫೆಬ್ರವರಿ.27 ರೊಳಗೆ ವಿಮೆಯನ್ನು ನೋಂದಾಯಿಸಿಕೊಳ್ಳಲು ಸ್ಥಳೀಯ ಬ್ಯಾಂಕ್‍ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶರ ಕಚೇರಿ ಹಾಗೂ ಸಂರಕ್ಷಣೆ ಫೋರ್ಟಲ್ ಲಿಂಕ್ https://www.samrakshane.karnataka.gov.in ಅಥವಾ ಸಂರಕ್ಷಣೆ ಸಹಾಯವಾಣಿ ಸಂಖ್ಯೆ.080-26564535, 080-26564536, 08026564537 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್