ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ಆಗ್ರಹ
ಗದಗ, 12 ನವೆಂಬರ್ (ಹಿ.ಸ.) ಆ್ಯಂಕರ್: ಭಾರತೀಯ ಜನತಾ ಪಕ್ಷ ಗದಗ ಜಿಲ್ಲಾ ಯುವ ಮೋರ್ಚಾ ವತಿಯಿಂದ ಗದಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವರ ರಾಜೀನಾಮೆ ನೀಡಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ನೀಡಲಾಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸ
ಫೋಟೋ


ಗದಗ, 12 ನವೆಂಬರ್ (ಹಿ.ಸ.)

ಆ್ಯಂಕರ್:

ಭಾರತೀಯ ಜನತಾ ಪಕ್ಷ ಗದಗ ಜಿಲ್ಲಾ ಯುವ ಮೋರ್ಚಾ ವತಿಯಿಂದ ಗದಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವರ ರಾಜೀನಾಮೆ ನೀಡಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ ಮಾತನಾಡಿ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಕೈದಿಗಳಿಗೆ ರಾಜಾತಿಥ್ಯ ನೀಡುವ ಮೂಲಕ ರಾಜ್ಯ ಸರ್ಕಾರ ಕ್ರಿಮಿನಲ್‍ಗಳನ್ನು ಪೋಷಿಸುವ ಕೆಲಸ ಮಾಡುತ್ತಿರುವ ಬಗ್ಗೆ ರಾಜ್ಯದ ಜನತೆಯಲ್ಲಿ ಆಕ್ರೋಶದ ಮೂಲಕ ವ್ಯಕ್ತವಾಗಿದೆ ಎಂದರು.

ಗದಗ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಸಂತೋಷ ಅಕ್ಕಿ ಮಾತನಾಡಿ ಅಪರಾಧಿಕ ಮನಸ್ಸಿನಿಂದ ಹೊರಬರಲು ಶಿಕ್ಷೆಗೆ ಒಳಗಾದ ಕೈದಿಗಳಿಗೆ ಜೈಲುಗಳಲ್ಲೇ ರಾಜಾಶ್ರಯ ನೀಡುವ ಮೂಲಕ ರಾಜ್ಯ ಸರ್ಕಾರ ಭಯೋತ್ಪಾದಕರು, ಕ್ರಿಮಿನಲ್‍ಗಳು, ಅತ್ಯಾಚಾರಿಗಳು ಹಾಗೂ ವಂಚಕರಿಗೆ ನಿರ್ಭೀತಿಯಿಂದ ಮೊಬೈಲ್, ಮಧ್ಯ, ಗಾಂಜಾ, ಸಿಗರೇಟ್ ಸೇರಿದಂತೆ ಎಲ್ಲಾ ಸೌಲತ್ತುಗಳನ್ನು ದೊರಕಿಸಿಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವಿಡಿಯೋಗಳು ಭಿತ್ತರಗೊಂಡಿವೆ. ಇದು ಇಡೀ ರಾಜ್ಯವೇ ನಾಚಿಕೆಪಡುವ ಸಂಗತಿಯಾಗಿದೆ. ಈಗಾಗಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಭಯೋತ್ಪಾದಕನಿಗೆ ಮೊಬೈಲ್ ನೀಡಿರುವುದು ದೇಶಕ್ಕೆ ಗಂಡಾಂತರ ತರುವ ಕೃತ್ಯವಾಗಿದೆ. ಸೀರಿಯಲ್ ರೇಪಿಸ್ಟ್ ಉಮೇಶ್ ರೆಡ್ಡಿಯಂತಹ ಅಪರಾಧಿಗಳಿಗೆ ಐಷರಾಮಿ ಸೌಲತ್ತುಗಳನ್ನು ನೀಡಿರುವುದು ಕಣ್ಣಿಗೆ ರಾಚುವಂತಿದೆ. ಅಲ್ಲದೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಲು ಎನ್‍ಐಎ ಗೆ ಈ ಪ್ರಕರಣವನ್ನು ನೀಡಬೇಕು ಎಂದು ಈ ಮೂಲಕ ಬಿಜೆಪಿ ಯುವ ಮೋರ್ಚಾ ಗದಗ ಜಿಲ್ಲಾ ಘಟಕ ಆಗ್ರಹಿಸುತ್ತದೆ ಎಂದರು.

ಯುವ ಮೋರ್ಚಾ ಗದಗ ನಗರ ಮಂಡಲ ಅಧ್ಯಕ್ಷ ನವೀನ ಕೊಟೆಕಲ್ ಮಾತನಾಡಿ ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಜೈಲು ಸೇರಿದ ತರುಣ್ ಎನ್ನುವ ಆರೋಪಿಗೂ ಸಹ ರೆಸಾರ್ಟ್ ಸೌಲಭ್ಯ ನೀಡಿರುವುದನ್ನು ಗಮನಿಸಿದರೆ ಗೃಹ ಸಚಿವರು ನಿದ್ದೆ ಮಾಡುತ್ತಿದ್ದಾರೋ ಅಥವಾ ಎಲ್ಲರನ್ನು ಅವರೆ ವ್ಯವಸ್ಥೆ ಮಾಡಲು ಜೈಲಿನ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದಾರೋ ಎನ್ನುವ ಅನುಮಾನಗಳು ಜನತೆಯನ್ನು ಕಾಡುತ್ತಿವೆ. ಈ ಕೃತ್ಯವನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಜೊತೆಗೆ ಈ ಎಲ್ಲಾ ಕಾರಣಗಳಿಗೆ ನೈತಿಕ ಹೊಣೆ ಹೊತ್ತು ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ, ಆರ್.ಕೆ.ಚವ್ಹಾಣ, ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಪ್ರಮುಖರಾದ ಅನೀಲ ಅಬ್ಬಿಗೇರಿ, ಶಶಿಧರ ದಿಂಡೂರ, ಅಮರನಾಥ ಗಡಗಿ, ಎಫ್.ಎಸ್.ಗೋಡಿ, ಮಂಜುನಾಥ ಶಾಂತಗೇರಿ, ಸುರೇಶ ಚಿತ್ತರಗಿ, ಶಂಕರ ಕಾಕಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿ ಕತ್ತಿ, ಕಿರಣ ಕಲಾಲ, ಸಂತೋಷ ಜಾವೂರ, ಗ್ರಾಮೀಣ ಮಂಡಲ ಯುವ ಮೋರ್ಚಾ ಅಧ್ಯಕ್ಷ ಅರವಿಂದ ಅಣ್ಣಿಗೇರಿ, ನಗರಸಭಾ ಸದಸ್ಯರಾದ ವಿಜಯಲಕ್ಷ್ಮೀಮಿ ದಿಂಡೂರ, ವಿದ್ಯಾವತಿ ಗಡಗಿ, ಯುವ ಮೋರ್ಚಾ ರೋಣ ಮಂಡಲ ಅಧ್ಯಕ್ಷ ಹುಲ್ಲಪ್ಪ ಕೆಂಗಾರ, ಯುವ ಮೋರ್ಚಾ ಗದಗ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ ನರೆಗಲ್, ವಿರೇಶಪ್ರಭು ಗದಗಿನ, ವಿನಾಯಕ ಹೊರಕೇರಿ, ಕಾರ್ತಿಕ ಶಿಗ್ಲಿಮಠ, ರಜತ್ ಬಿಮ್ಕರ್, ಸಾಗರ ಪಾಪನಾಳ, ಮಂಜುನಾಥ, ಕಿರಣ ಕಟ್ಟಿ, ನವೀನ ಕುರ್ತಕೋಟಿ, ಸುರೇಶ ಚವ್ಹಾಣ, ಅಕ್ಷಯ ರೆವಣಕರ, ಕಿರಣ ದಾಟನಾಳ, ಹಾಲೇಶ, ಮಲ್ಲಿಕಾರ್ಜುನ ಕಳಸಾಪೂರ, ಮಂಜುನಾಥ, ವಿನೋದ ಹಂಸನೂರ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande