
ವಿಜಯಪುರ, 12 ನವೆಂಬರ್ (ಹಿ.ಸ.)
ಆ್ಯಂಕರ್: ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಗದ್ದೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ತಾಲ್ಲೂಕಿನ ಜುಮನಾಳ ಗ್ರಾಮದಲ್ಲಿ ನಡೆದಿದೆ.
ರೈತ ಹನುಮಂತ ಈಶ್ವರಪ್ಪ ಉಮರಾಣಿ ಅವರ 3 ಎಕರೆ 20 ಗುಂಟೆ ಜಮೀನಿನ ಪೈಕಿ 1 ಎಕರೆ 20 ಗುಂಟೆ ಕಬ್ಬು ಸುಟ್ಟು ಭಸ್ಮವಾಗಿದೆ. ಅಂದಾಜು ಆರು ಲಕ್ಷ ನಷ್ಟ ಆಗಿದೆ. ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅಲ್ಲದೇ, ಬೆಂಕಿ ಅವಘಡದಲ್ಲಿ ಪೈಪ್ ಲೈನ್ ಮತ್ತು ಸ್ಪಿಂಕಲರ್‌ಗಳೂ ಸಂಪೂರ್ಣವಾಗಿ ಸುಟ್ಟು ಹಾನಿಯಾಗಿದೆ. ರೈತರಿಂದ ಹೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪರಿಹಾರಕ್ಕೆ ಆಗ್ರಹಿಸಿದರು.
ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande