
ಬಳ್ಳಾರಿ, 13 ನವೆಂಬರ್ (ಹಿ.ಸ.) :
ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಮಳೆಯಾಶ್ರಿತ ಬೆಳೆಗಳಾದ ಜೋಳ, ಸೂರ್ಯಕಾಂತಿ ಮತ್ತು ಕಡಲೆ ಬೆಳೆಗಳಿಗೆ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆ ಅಳವಡಿಸಲಾಗಿದೆ. ಸಿಟಿಜನ್ ಲಾಗಿನ್ ಅಥವಾ ಆರ್‍ಎಸ್‍ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಆನ್ ಲೈನ್ ಕೆ-ಕಿಸಾನ್ ಪೋರ್ಟಲ್ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‍ಐಡಿ ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್