ಬಳ್ಳಾರಿ : ನಾನಾ ಕಡೆ ದಾಳಿ, ಓರ್ವ ಬಾಲಕಾರ್ಮಿಕನ ರಕ್ಷಣೆ
ಬಳ್ಳಾರಿ, 13 ನವೆಂಬರ್ (ಹಿ.ಸ.) ಆ್ಯಂಕರ್ : ಸಂಡೂರು ತಾಲ್ಲೂಕಿನ ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ಮುಖ್ಯ ರಸ್ತೆಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ ಕೆಲಸ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ
ಬಳ್ಳಾರಿ: ವಿವಿಧೆಡೆ ದಾಳಿ: ಓರ್ವ ಬಾಲಕಾರ್ಮಿಕನ ರಕ್ಷಣೆ


ಬಳ್ಳಾರಿ: ವಿವಿಧೆಡೆ ದಾಳಿ: ಓರ್ವ ಬಾಲಕಾರ್ಮಿಕನ ರಕ್ಷಣೆ


ಬಳ್ಳಾರಿ, 13 ನವೆಂಬರ್ (ಹಿ.ಸ.)

ಆ್ಯಂಕರ್ : ಸಂಡೂರು ತಾಲ್ಲೂಕಿನ ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ಮುಖ್ಯ ರಸ್ತೆಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ ಕೆಲಸ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ ನಡೆಸಿ ಓರ್ವ ಬಾಲಕಾರ್ಮಿಕನನ್ನು ರಕ್ಷಿಸಲಾಗಿದೆ.

ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ತಹಶೀಲ್ದಾರರ ನೇತೃತ್ವದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ.

ಮಗುವಿನ ಹೇಳಿಕೆಯನ್ನು ಸ್ಥಳದಲ್ಲಿ ಪಡೆದುಕೊಂಡು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.

ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಉಪತಹಶೀಲ್ದಾರ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಕಾರ್ತಿಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande