ಬಳ್ಳಾರಿ : ನ.15 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ
ಬಳ್ಳಾರಿ, 13 ನವೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-2 ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನ.15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಎಸ್.ಜೆ ಕೋಟೆ ಗ್ರಾಮದ
ಬಳ್ಳಾರಿ : ನ.15 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ


ಬಳ್ಳಾರಿ, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-2 ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನ.15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಎಸ್.ಜೆ ಕೋಟೆ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಆಯೋಜಿಸಲಾಗಿದೆ.

ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೋಹನಬಾಬು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande