
ವಿಜಯಪುರ, 13 ನವೆಂಬರ್ (ಹಿ.ಸ.) :
ಆ್ಯಂಕರ್ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ್ ಕ್ರಾಸ್ ಬಳಿ ನಡೆದಿದೆ.
ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿದೆ. ಇದರಿಂದ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಅಸುನೀಗಿದ್ದಾರೆ. ಅಲ್ಲದೇ, ಕಾರು ಚಾಲಕನು ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ,ಪರಿಶೀಲನೆ ನಡೆಸಿದರು. ಮುಧೋಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande