
ಬಳ್ಳಾರಿ, 13 ನವೆಂಬರ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನಾಳೆ ನಡೆಯಲಿದ್ದು, ಸುತ್ತಲೂ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ-ಮುತ್ತಲಿನ 500 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್