
ಬಳ್ಳಾರಿ, 13 ನವೆಂಬರ್ (ಹಿ.ಸ.) :
ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಎಂಎಸ್‌ಎಂಇ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸಿಸುವುದು (ಆರ್‌ಎಎಂಪಿ) ಯೋಜನೆಯಡಿ ನ.14 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಪರಿಸರ ಮತ್ತು ಸಾಮಾಜಿಕ ನಿರ್ವಹಣೆ (ಇಎಸ್‌ಎಂ) ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಅವರು ತಿಳಿಸಿದ್ದಾರೆ.
ಕಾರ್ಯಾಗಾರದಲ್ಲಿ ಉದ್ಯಮಿದಾರರಿಗೆ ಪರಿಸರ ನಿರ್ವಹಣೆ ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ತಜ್ಞರು, ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಂಪರ್ಕ ಸಾಧಿಸಲು, ಅವಕಾಶಗಳನ್ನು ಒದಗಿಸಿಕೊಡಲಾಗುತ್ತದೆ. ಆಸಕ್ತಿಯುಳ್ಳ ಉದ್ದಿಮೆದಾರರು ಪಾಲ್ಗೊಳ್ಳಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್