
ಬಳ್ಳಾರಿ, 13 ನವೆಂಬರ್ (ಹಿ.ಸ.) :
ಆ್ಯಂಕರ್ : ಮೀನುಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸ ಮೀನುಕೃಷಿ ಕೊಳಗಳ ನಿರ್ಮಾಣ, ಐಸ್ ಬಾಕ್ಸ್‍ನೊಂದಿಗೆ ಮೋಟಾರ್ ಸೈಕಲ್ ನೀಡಲು ಆಸಕ್ತಿ ಹೊಂದಿರುವ ಫಲಾನುಭವಿಗಳು ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40 ರಂತೆ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ನ.19 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ಮೊ.9449593156, ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಬಳ್ಳಾರಿ ಮೊ.7406508971 ಮತ್ತು ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಮೊ.7204911897 ಗೆ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್