ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಮಾಡಲು ಗೋವಿಂದಗೌಡ್ರ ಮನವಿ
ಗದಗ, 13 ನವೆಂಬರ್ (ಹಿ.ಸ.) : ಆ್ಯಂಕರ್ : ಮುಂಬರುವ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರಿಗೆ ಇಂದು ಬೆಂಗಳೂರುನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯ
ಫೋಟೋ


ಗದಗ, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಮುಂಬರುವ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರಿಗೆ ಇಂದು ಬೆಂಗಳೂರುನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಾದ ಜೆ.ಪಿ ಭವನದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ವಕ್ತರ ವೆಂಕನಗೌಡ ಆರ್ ಗೋವಿಂದಗೌಡ್ರ ಮನವಿ ಸಲ್ಲಿಸಿದರು.

ಈಗಾಗಲೇ ಮತದಾರರ ನೋಂದಣಿಯನ್ನು ತೀವ್ರವಾಗಿ ಮಾಡುತ್ತಿದ್ದು ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಕೂಡಿಸಿಕೊಂಡು ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ ಮತದಾರರನ್ನು ನೋಂದಣಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಎಚ್ ಡಿ ಕುಮಾರಸ್ವಾಮಿ ಅವರಿಗೆ ವೆಂಕನಗೌಡ ಆರ್ ಗೋವಿಂದಗೌಡ್ರ ವಿವರಿಸಿದರು.

ಪಕ್ಷದ ಅಭ್ಯರ್ಥಿಯಾಗುವುದರಿಂದ ಪಕ್ಷದ ಸಂಘಟನೆಗೆ ಆಗುವ ಲಾಭವನ್ನು ಕೂಡ ಅವರು ಈ ಸಂದರ್ಭದಲ್ಲಿ ವಿವರಿಸಿದರು ಮನವಿಯನ್ನು ಸ್ವೀಕರಿಸಿದ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ತಿಳಿಸಿದರು, ಅಲ್ಲಿಯವರೆಗೂ ಕೂಡ ಮತದಾರರ ನೋಂದಣಿಯನ್ನು ಕೈಗೊಳ್ಳಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ನೋಂದಣಿಯಾಗುವಂತೆ ನೋಡಿಕೊಳ್ಳಬೇಕೆಂದು ಅವರು ಮಾರ್ಗದರ್ಶನ ಮಾಡಿದರು.

ಈ ಬಗ್ಗೆ ಪಕ್ಷದ ಹಿರಿಯರು ನೋಂದಣಿಯ ಚಟುವಟಿಕೆ ಬಗ್ಗೆ ನಿಗ ವಹಿಸಿರುತ್ತಾರೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಹಾವೇರಿ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಗೌಡಶಿವಣ್ಣವರ್ ಹುಬ್ಬಳ್ಳಿ ಧಾರವಾಡ ಮಹಾನಗರದ ಜಿಲ್ಲಾಧ್ಯಕ್ಷರಾದ ಗುರುರಾಜ್ ಹುಣಸಿಮರಾದ ಪಕ್ಷದ ಪ್ರಮುಖರಾದ ಸಿದ್ದಲಿಂಗೇಶ್ವರ ಮಹಾಂತ ಒಡೆಯರ್, ಜಿ.ಕೆ ಕೊಳ್ಳಿಮಠ, ಮಲ್ಲನಗೌಡ ಪಾಟೀಲ, ಪಕ್ಷದ ಹಿರಿಯರು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande