ಕೊಪ್ಪಳ : ನಾಳೆಯಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ
ಕೊಪ್ಪಳ, 13 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಇಲಾಖೆ ಕೊಪ್ಪಳ ಹಾಗೂ ಜಿಲ್ಲೆಯ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ರ ಕಾರ್ಯಕ್ರಮವನ್ನು ನಾಳೆಯಿಂದ ನ. 20ರ ವರೆಗ
ಕೊಪ್ಪಳ : ನಾಳೆಯಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ


ಕೊಪ್ಪಳ, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಇಲಾಖೆ ಕೊಪ್ಪಳ ಹಾಗೂ ಜಿಲ್ಲೆಯ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ರ ಕಾರ್ಯಕ್ರಮವನ್ನು ನಾಳೆಯಿಂದ ನ. 20ರ ವರೆಗೆ ಜಿಲ್ಲೆಯಲ್ಲಿ 7 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

ವಿವಿಧ ವಿಷಯಗಳಲ್ಲಿ ಸಹಕಾರ ಸಪ್ತಾಹ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ನ್ನು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು'' ಎಂಬ ಮುಖ್ಯಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ನ. 14ರಂದು ಬೆಳ್ಳಿಗ್ಗೆ 11 ಗಂಟೆಗೆ ಸಹಕಾರ ಇಲಾಖೆ ಮತ್ತು ಸಂಸ್ಥೆಗಳ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ., ಕೊಪ್ಪಳ ಇವರ ಸಭಾಂಗಣದಲ್ಲಿ ``ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದು'' ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಲಿದೆ.

ನ. 15 ರಂದು ಬೆಳ್ಳಿಗ್ಗೆ 11 ಗಂಟೆಗೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಮರಳಿ ಇವರ ಸಭಾಂಗಣದಲ್ಲಿ ``ತ್ರಿಭುವನ್ ಸಹಕಾರ ವಿಶ್ವವಿದ್ಯಾಲಯ: ಸಂಶೋಧನೆ & ತರಬೇತಿಯಿಂದ ಸಹಕಾರ ಶಿಕ್ಷಣ ಪರಿವರ್ತನೆ'' ವಿಷಯದ ಬಗ್ಗೆ, ನ. 16 ರಂದು ಬೆಳ್ಳಿಗ್ಗೆ 11 ಗಂಟೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಹಿರೇಮನ್ನಾಪುರ (ಕುಷ್ಟಗಿ)ದಲ್ಲಿ ``ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ'' ವಿಷಯದ ಕುರಿತು, ನ. 17 ರಂದು 3 ಗಂಟೆಗೆ ಅಭ್ಯುದಯ ಪತ್ತಿನ ಸಹಕಾರ ಸಂಘ ನಿ., ಕಾರಟಗಿ ಇವರ ಸಭಾಂಗಣದಲ್ಲಿ ``ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ'' ವಿಷಯದ ಬಗ್ಗೆ, ನ. 18 ರಂದು ಬೆಳ್ಳಿಗ್ಗೆ 11 ಗಂಟೆಗೆ ಪುಷ್ಕರಣಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ ನಿ., ಕೊಪ್ಪಳ ಇವರ ಸಭಾಂಗಣದಲ್ಲಿ ``ಸಹಕಾರಿ ಉಧ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ (ಕರಕುಶಲ, ಕೈಮಗ್ಗ, ಕಾರ್ಮಿಕ, ಮಿನುಗಾರಿಕೆ ಇತ್ಯಾದಿ)'' ವಿಷಯದ ಕುರಿತು, ನ. 19 ರಂದು ಬೆಳ್ಳಿಗ್ಗೆ 10 ಗಂಟೆಗೆ ಮಧುಶ್ರೀ ಗಾರ್ಡನ್ ಕೊಪ್ಪಳ ಸಭಾಂಗಣದಲ್ಲಿ ``ಪ್ರವಾಸೋಧ್ಯಮ, ಆರೋಗ್ಯ, ಹಸಿರು ಇಂದನ, ಪ್ಲಾಟ್‍ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ'' ಎಂಬ ವಿಷಯದ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದೆ ಮತ್ತು ನ. 20 ರಂದು ಬೆಳ್ಳಿಗ್ಗೆ 11 ಗಂಟೆಗೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ದ್ಯಾಂಪುರ ಇವರ ಸಭಾಂಗಣದಲ್ಲಿ ``ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು'' ವಿಷಯದ ಬಗ್ಗೆ ಕಾರ್ಯಕ್ರಮ ನಡೆಯಲಿದೆ.

72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ರ ಪ್ರಯುಕ್ತ ಒಟ್ಟು 7 ದಿನಗಳಲ್ಲಿ ಕಡ್ಡಾಯವಾಗಿ ಸಹಕಾರ ಸಂಘಗಳ ಕಟ್ಟಡದ ಮೇಲೆ ಸಪ್ತವರ್ಣದ ಸಹಕಾರ ಬಾವುಟವನ್ನು ಹಾರಿಸುವುದರೊಂದಿಗೆ ಸಹಕಾರ ಕ್ಷೇತ್ರದ ಅಸ್ತಿತ್ವವನ್ನು ಸಾರ್ವಜನಿಕರಿಗೆ ತೋರಿಸಿಕೊಡಬೇಕು. ಅಂದಿನ ದಿನಗಳಲ್ಲಿ ಹಿರಿಯ ಸಹಕಾರಿಗಳಿಗೆ ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ, ಹೊಸ ಯೋಜನೆಗಳ ಅನುμÁ್ಠನ ಮುಂತಾದ ನೈಜ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು.

ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹಾಗೂ ಸಹಕಾರಿಗಳಿಗೆ ಉಪಯುಕ್ತವಾಗುವಂಥಹ ಉಚಿತ ಆರೋಗ್ಯ ತಪಾಸಣೆ ಶಿಬಿರ, ಲಸಿಕೆ ಕಾರ್ಯಕ್ರಮ, ರಕ್ತದಾನ ಶಿಬಿರ, ಸಹಕಾರ ಸಂಘಗಳು ಎದುರಿಸುತ್ತಿರುವ ಸವಾಲುಗಳು, ಸವಾಲುಗಳನ್ನು ಎದುರಿಸಲು ಅಗತ್ಯವಾದ ಮಾರ್ಗೋಪಾಯಗಳು, ಸಂವಾದ ಕಾರ್ಯಕ್ರಮಗಳು, ವಿಡಿಯೋ ಕಾನ್ವರೆನ್ಸ್, ವೆಬಿನಾರ್ ಮುಂತಾದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕಾರಣ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಕಾರ್ಯಕ್ರಮ ಜರುಗುವ ಸ್ಥಳದಲ್ಲಿ ಹಾಜರಾಗಿ ಸಹಕಾರ ಚಳುವಳಿಯನ್ನು ಬಲಪಡಿಸುವಂತೆ ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande