ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ : ವೆಂಕಟೇಶ
ರಾಯಚೂರು, 13 ನವೆಂಬರ್ (ಹಿ.ಸ.) : ಆ್ಯಂಕರ್ : ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ದಿಶೆಯಲ್ಲಿ ಮಕ್ಕಳ ಹಕ್ಕುಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಲು ಕಾಯ್ದೆಗಳನ್ನು ಅರಿತುಕೊಳ್ಳಬೇಕು. ಇದರಿಂದ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿ ಕೊಡಬಹುದಾಗಿದೆ ಎಂ
ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: ವೆಂಕಟೇಶ


ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: ವೆಂಕಟೇಶ


ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: ವೆಂಕಟೇಶ


ರಾಯಚೂರು, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ದಿಶೆಯಲ್ಲಿ ಮಕ್ಕಳ ಹಕ್ಕುಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಲು ಕಾಯ್ದೆಗಳನ್ನು ಅರಿತುಕೊಳ್ಳಬೇಕು. ಇದರಿಂದ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿ ಕೊಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ ಅವರು ಹೇಳಿದ್ದಾರೆ.

ಬೆಂಗಳೂರಿನ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 13ರಂದು ನಡೆದ ಬಾಲನ್ಯಾಯ ( ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ-2006,ಪೋಕ್ಸೋ ಕಾಯ್ದೆ-2012 ಹಾಗೂ ದತ್ತು ನಿಯಾಮವಳಿಗಳು-2022ರ ಕುರಿತು ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮಲ್ಲಿರುವ ಕಾನೂನುಗಳು ಮಾನವೀಯ ಮೌಲ್ಯಗಳಿಂದ ಕೂಡಿವೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳುವಂತೆ ಕಾನೂನುಗಳ ಸಮರ್ಪಕ ಅನುಷ್ಠಾನವು ನಮ್ಮಲ್ಲಿನ ಇಚ್ಛಾಶಕ್ತಿಯ ಮೇಲೆ ನಿಂತಿದೆ ಎಂದು ತಿಳಿಸಿದರು.

ಬಾಲ್ಯ ವಿವಾಹ, ಭಿಕ್ಷಾಟನೆ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಜಿಲ್ಲೆಯಲ್ಲಿ ಶೂನ್ಯಕ್ಕಿಳಿಯುವ ದಿಶೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯು ಕೇವಲ ಒಂದು ದಿನ ಅಥವಾ ಸಹಾಯವಾಣಿ ಕರೆಗಳು ಬಂದಾಗ ಮಾತ್ರ ಕಾರ್ಯಾಚರಣೆ ನಡೆಸಬಾರದು. ನಿತ್ಯ ಕಾರ್ಯಾಚರಣೆಯಲ್ಲಿ ತೊಡಗಿಕೊಳ್ಳಬೇಕು. ಮಕ್ಕಳ ರಕ್ಷಣೆಯ ಜವಾಬ್ದಾರಿಯು ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ್ದಾಗಿ ಎಂದು ಯಾರು ತಿಳಿಯಬಾರದು. ಮಕ್ಕಳ ರಕ್ಷಣೆಗೆ ಬೇರೆ ಬೇರೆ ಇಲಾಖೆಗಳು ಸಹ ಕೈಜೋಡಿಸಬೇಕು. ಮುಖ್ಯವಾಗಿ ಸಾರ್ವಜನಿಕರು ಸಹಕಾರ ನೀಡಬೇಕೆಂದರು.

ಈ ವೇಳೆ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಸಿ.ಐ.ಡಿ. ಕಚೇರಿಯ ಪೊಲೀಸ್ ತರಬೇತುದಾರರಾದ ರೋಹಿತ್ ಸಿ.ಜೆ. ಅವರು ಮಾತನಾಡಿ, ಮಕ್ಕಳ ವಲಸೆ, ಗುಳೆ, ಮಕ್ಕಳ ಸಾಗಾಣಿಕೆ, ಮಕ್ಕಳ ಬಿಕ್ಷಾಟನೆ ನಿರ್ಮೂಲನೆ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ-2015, ಪೋಕ್ಸೋ , ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಬಿಕ್ಷಾಟನೆ ನಿರ್ಮೂಲನೆ ಕುರಿತು ಮಾಹಿತಿ ನೀಡಿದರು.

ಭಿಕ್ಷಾಟನೆ ಮಾಡುತ್ತಿರುವ ಮಕ್ಕಳು, ಬಾಲ ಕಾರ್ಮಿಕ ಮಕ್ಕಳು, ಕಾಣೆಯಾದ ಮಕ್ಕಳು, ಒಂಟಿ ಮಕ್ಕಳು, ಮಾದಕ ವ್ಯಸನಿ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ಅತ್ಯಾಚಾರ, ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ತಕ್ಷಣವೇ 1098 ಅಥವಾ 112 ಗೆ ಕರೆ ಮಾಡಬಹುದು ಎಂದು ತಿಳಿಸಿದರು.

ಪ್ರತಿಜ್ಞಾ ವಿಧಿ ಬೋಧನೆ: ಬಾಲನ್ಯಾಯ ಕಾಯ್ದೆ 2015ರ ಸೆಕ್ಷನ್ 81 ರನ್ವಯ ಮಕ್ಕಳನ್ನು ಮಾರಾಟ ಮಾಡಿದವರಿಗೂ ಹಾಗೂ ಮಕ್ಕಳನ್ನು ಕೊಂಡುಕೊಳ್ಳುವವರಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ಗಳ ದಂಡವನ್ನು ವಿಧಿಸಬಹುದು. ಒಂದು ವೇಳೆ ಅಂತಹ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಯವರು ಶಾಮೀಲಾಗಿದ್ದಲ್ಲಿ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಕುಟುಂಬವಿಲ್ಲದ ಮಕ್ಕಳಿಗೆ ಕಾನೂನು ಬದ್ಧವಾಗಿ ಕುಟುಂಬವನ್ನು ಒದಗಿಸುವುದು. ಅನಾಥ, ಒಪ್ಪಿಸಲ್ಪಟ್ಟ, ನಿರ್ಗತಿಕ ಮತ್ತು ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ: 1098/112ಗೆ ಕರೆ ಮಾಡುವುದರ ಮುಖಾಂತರ ಮಕ್ಕಳ ಭವಿಷ್ಯತ್ತಿನ ಹಿತಾಸಕ್ತಿಗಾಗಿ ಎಲ್ಲರೂ ಕೈಜೋಡಿಸಿ ಮಕ್ಕಳನ್ನು ಅನಾಥ ಪ್ರಜ್ಞೆಯಿಂದ ಕಾಪಾಡುವುದರೊಂದಿಗೆ ತಾಯಿತನದ ಹಂಬಲವನ್ನು ನೀಗಿಸೋಣ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಪೋಸ್ಟರ್ ಬಿಡುಗಡೆ: ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರ ವತಿಯಿಂದ ದತ್ತು ಪ್ರಕ್ರಿಯೆ ಹಾಗೂ 1098 ಮಕ್ಕಳ ಸಹಾಯವಾಣಿ ಪೋಸ್ಟರ್‍ಗಳನ್ನು ವಿವಿಧ ಗಣ್ಯರಿಂದ ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಜಿಲ್ಲಾ ಸದಸ್ಯರಾದ ಜಯ ಸುಧಾರಾಣಿ, 1ನೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಜೆ. ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಯು. ನವೀನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಅಮರೇಶ, ಪೆÇಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಅಧಿಕಾರಿ, ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande