ಈಡನ್ ಗಾರ್ಡನ್ಸ್ ಟೆಸ್ಟ್ ಪಂದ್ಯಕ್ಕೆ ವಿಶೇಷ ಭದ್ರತಾ ವ್ಯವಸ್ಥೆ
ಕೋಲ್ಕತ್ತಾ, 13 ನವೆಂಬರ್ (ಹಿ.ಸ.) : ಆ್ಯಂಕರ್ : ಶುಕ್ರವಾರ ಆರಂಭವಾಗಲಿರುವ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಕೋಲ್ಕತ್ತಾ ಪೊಲೀಸರು ನಗರಾದ್ಯಂತ ಭದ್ರತೆಯನ್ನು ಕಠಿಣಗೊಳಿಸಿದ್ದಾರೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣ ಹಾಗೂ ಅದರ ಸುತ್ತಮುತ್ತ ಪ್ರದೇಶಗಳಲ್ಲಿ ವಿಶೇಷ ವ್ಯವಸ
Security


ಕೋಲ್ಕತ್ತಾ, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಶುಕ್ರವಾರ ಆರಂಭವಾಗಲಿರುವ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಕೋಲ್ಕತ್ತಾ ಪೊಲೀಸರು ನಗರಾದ್ಯಂತ ಭದ್ರತೆಯನ್ನು ಕಠಿಣಗೊಳಿಸಿದ್ದಾರೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣ ಹಾಗೂ ಅದರ ಸುತ್ತಮುತ್ತ ಪ್ರದೇಶಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.

ಎರಡೂ ತಂಡಗಳ ಸುರಕ್ಷತೆಗೆ ಪ್ರತ್ಯೇಕ ಭದ್ರತಾ ಕವಚ ಒದಗಿಸಲಾಗಿದ್ದು, ಹೋಟೆಲ್‌ನಿಂದ ಅಭ್ಯಾಸ ಮೈದಾನಗಳವರೆಗೆ ಹಾಗೂ ಪ್ರಯಾಣದ ಸಮಯದಲ್ಲಿ ಪೊಲೀಸ್ ಪೆರೇಡ್ ವ್ಯವಸ್ಥೆ ಜಾರಿಯಲ್ಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಂದ್ಯದ ಐದು ದಿನಗಳ ಕಾಲ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿರಲಿದ್ದು, ಮೈದಾನ್ ಮತ್ತು ಈಡನ್ ಗಾರ್ಡನ್ಸ್ ಸುತ್ತಮುತ್ತ ಸಂಚಾರವನ್ನು ನಿಯಂತ್ರಿಸಲು ನವೆಂಬರ್ 14ರಿಂದ 18ರವರೆಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಲಾಗಿದೆ. ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸಾರಿಗೆ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದ್ದು, ಜನಸಂದಣಿ ಪರಿಸ್ಥಿತಿಯನ್ನು ಅವಲಂಬಿಸಿ ಮಾರ್ಗಸೂಚಿಗಳು ಪರಿಷ್ಕೃತಗೊಳ್ಳಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande