
ಬಳ್ಳಾರಿ, 13 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಬಳ್ಳಾರಿ ಹಾಗೂ ಶಾಲಾ ಶಿಕ್ಷಣ ಇಲಾಖೆೆ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ (14 ಮತ್ತು 17 ವರ್ಷದೊಳಗಿನ ಬಾಲಕ/ಬಾಲಕಿಯರ) 2025-26 ನೇ ಸಾಲಿನ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಗಳನ್ನು ನವೆಂಬರ್ 15 ರಿಂದ 17 ರ ವರೆಗೆ ನಗರದ ಕಂಟೋನ್ ಮೆಂಟ್ ಪ್ರದೇಶದ ನಂದಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ.
ನ.15 ರಂದು ಬೆಳಿಗ್ಗೆ 10.30 ಗಂಟೆಗೆ ನಂದಿ ಪ್ರೌಢಶಾಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾ ದೈಹಿಕ ಪರಿವೀಕ್ಷಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್