
ಕೊಪ್ಪಳ, 14 ನವೆಂಬರ್ (ಹಿ.ಸ.)
ಆ್ಯಂಕರ್ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಆತ್ಮ ನಿರ್ಭರ್ ಯೋಜನೆಯಡಿಯಲ್ಲಿ ಕೊಪ್ಪಳ ನಗರದ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯದಡಿಯಲ್ಲಿ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಒದಗಿಸಲು ಕೊಪ್ಪಳ ನಗರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಿದೆ.
ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯದಡಿಯಲ್ಲಿ ಬ್ಯಾಂಕಿನ ಮೂಲಕ ಮೊದಲನೇ ಹಂತದಲ್ಲಿ ರೂ.15,000/- (ಸಾಲದ ಅವಧಿ 12 ತಿಂಗಳು), ಎರಡನೇ ಹಂತದಲ್ಲಿ ರೂ.25,000/- (ಸಾಲದ ಅವಧಿ 18 ತಿಂಗಳು) ಮತ್ತು ಮೂರನೇ ಹಂತದಲ್ಲಿ ರೂ.50,000/- (ಸಾಲದ ಅವಧಿ 36 ತಿಂಗಳು) ಈ ರೀತಿಯಾಗಿ ಹಂತವಾರು ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯಗಳು ದೊರೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ನಗರಸಭೆಯ ಡೇ-ನಲ್ಮ್ ವಿಭಾಗದ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್