ಬಳ್ಳಾರಿ : ಹೊಸದಾಗಿ ನ್ಯಾಯಬೆಲೆ ಅಂಗಡಿ ಆರಂಭಿಸಲು ಅರ್ಜಿ ಆಹ್ವಾನ
ಬಳ್ಳಾರಿ, 14 ನವೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ರೈಲ್ವೆ ಗೇಟ್ ಬಳಿಯ ಆಂಜನೇಯ ದೇವಸ್ಥಾನದ ಹತ್ತಿರ ಪಡಿತರ ಚೀಟಿದಾರರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ ಪರಿಣಾಮಕಾರಿಗೊಳಿಸಲು ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು,
ಬಳ್ಳಾರಿ : ಹೊಸದಾಗಿ ನ್ಯಾಯಬೆಲೆ ಅಂಗಡಿ ಆರಂಭಿಸಲು ಅರ್ಜಿ ಆಹ್ವಾನ


ಬಳ್ಳಾರಿ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ರೈಲ್ವೆ ಗೇಟ್ ಬಳಿಯ ಆಂಜನೇಯ ದೇವಸ್ಥಾನದ ಹತ್ತಿರ ಪಡಿತರ ಚೀಟಿದಾರರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ ಪರಿಣಾಮಕಾರಿಗೊಳಿಸಲು ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು, ನಿಗಧಿತ ನಮೂನೆ-ಎ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ನಗರದ ನೂತನ ಜಿಲ್ಲಾಡಳಿತ ಭವನದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನದಿಂದ 30 ದಿನಗಳೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.

ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನ್ಯಾಯಬೆಲೆ ಅಂಗಡಿಯನ್ನು ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2018ರ ಆದ್ಯತೆಗಳನ್ನು ಪರಿಗಣಿಸಲಾಗುವುದು.

ವಿವರ : ಬಳ್ಳಾರಿ ನಗರದ ಗುಗ್ಗರಹಟ್ಟಿ ಪಟ್ಟಣ ಪ್ರದೇಶದ ಆಂಜನೇಯ ಗುಡಿ ಹತ್ತಿರದ ವೆಂಕಟಮ್ಮ ಕಾಲೋನಿ ಸೇರ್ಪಡೆಗೊಳ್ಳುವ ಪ್ರದೇಶವಾಗಿದ್ದು, ಒಟ್ಟು 2693 ಪಡಿತರ ಚೀಟಿಗಳಲ್ಲಿ ಅಂದಾಜು 850 ಪಡಿತರ ಚೀಟಿ ನಿಯೋಜನೆ, 1843 ನಿಯೋಜನೆ ನಂತರ ಉಳಿಯುವ ಪಡಿತರ ಚೀಟಿಗಳು.

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ, ಸಂಸ್ಥೆ, ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಅದರಂತೆ ಸಹಕಾರ ಸಂಘಗಳಾದ ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ (ನಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್., ತೋಟಗಾರಿಕೆ ಉತ್ಪನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ನೇಕಾರರ ಸಹಕಾರ ಸಂಘ, ನೋಂದಾಯಿತ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳು, ನೋಂದಾಯಿತ ವಿವಿಧೋದ್ದೇಶ ಸಹಕಾರ ಸಂಘಗಳು. ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್ ಮತ್ತು ವಿಕಲಚೇತನರು (ಸರ್ಕಾರ ನಿಯಮಾನುಸಾರ), ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಹಕಾರ ಸಂಘಗಳು ಕನಿಷ್ಠ ಮೂರು ವರ್ಷದ ಹಿಂದೆ ನೋಂದಾಯಿಸಿರಬೇಕು ಮತ್ತು ಮೂರು ವರ್ಷಗಳಿಂದ ನಿರಂತರ ಚಟುವಟಿಕೆಯಲ್ಲಿದ್ದು, ಎರಡು ವರ್ಷಗಳಿಂದ ಕನಿಷ್ಠ ಎರಡು ಲಕ್ಷ ರೂ. ಮೊತ್ತದ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು ಹಾಗೂ ಇತ್ತೀಚಿನ ಮೂರು ವರ್ಷಗಳ ಆಡಿಟ್ ವರದಿ ಸಲ್ಲಿಸಬೇಕು.

ಬೇಕಾದ ಕಡ್ಡಾಯ ದಾಖಲೆ :

ಅರ್ಜಿ ನಮೂನೆ 'ಎ', ಅಭ್ಯರ್ಥಿಯ ಎಸ್.ಎಸ್.ಎಲ್.ಸಿ ಅಂಕಪಟ್ಟಿ (ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು). ಸಹಕಾರ ಸಂಘ, ಸಂಸ್ಥೆಗಳ ಮತ್ತು ಸ್ವ-ಸಹಾಯ ಸಂಘಗಳಾದರೆ ನೋಂದಾವಣಿ ಪತ್ರ, ಸಹಕಾರ ಸಂಘ, ಸಂಸ್ಥೆಯಾದರೆ ಕಳೆದ 3 ವರ್ಷಗಳ ದೃಢೀಕೃತ ಲೆಕ್ಕ ಪರಿಶೋಧನಾ ವರದಿ, ಸಹಕಾರ ಸಂಘ, ಸಂಸ್ಥೆಗಳ ಉಪನಿಯಮಗಳು (ಬೈಲಾ).

ಸಹಕಾರ ಸಂಘ, ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ, ಸಹಕಾರ ಸಂಘ, ಸಂಸ್ಥೆಗಳ ಪರವಾಗಿ ನ್ಯಾಯಬೆಲೆ ಅಂಗಡಿ ನಡೆಸಲು ಮತ್ತು ಪ್ರಮಾಣ ಪತ್ರ ಸಲ್ಲಿಸಲು ಅಧಿಕಾರ ಪಡೆದಿರುವ ಪ್ರತಿನಿಧಿಯನ್ನು ನೇಮಿಸಿರುವ ಬಗ್ಗೆ ನಡವಳಿ ಪತ್ರದ ಪ್ರತಿ.

ಕರ್ನಾಟಕ ಸೊಸೈಟೀಸ್ ರಿಜಿಸ್ಟ್ರೇಷನ್ ಆಕ್ಟ್ 1959 ಅಡಿ ವಿಚಾರಣೆ, ಟ್ರಯಲ್ ಮತ್ತು ಲಿಕ್ವಿಡೇಷನ್, ನಡವಳಿ ನಡೆದಿರುವುದಿಲ್ಲ ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಢೀಕರಣ ಪತ್ರ, ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ, ಕರಾರು ಪತ್ರ. ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ. ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಪಾಸ್ ಪೆÇೀರ್ಟ್ ಅಳತೆಯ ಭಾವಚಿತ್ರ. ವಾಸ ಸ್ಥಳ ಪ್ರಮಾಣ ಪತ್ರ. ಅರ್ಜಿದಾರರ, ಸಂಘದ ಅಧ್ಯಕ್ಷ, ಕಾರ್ಯದರ್ಶಿಗಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗದಿರುವ ಬಗ್ಗೆ ಅಫಿಡೇವಿಟ್.

ಅರ್ಜಿಯ ಜೊತೆ ಮೇಲ್ಕಂಡ ಎಲ್ಲಾ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ ನಿಗಧಿತ ದಿನಾಂಕದೊಳಗಾಗಿ ಉಪ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, (ಬಳ್ಳಾರಿ ನೂತನ ಜಿಲ್ಲಾಡಳಿತ ಭವನ, ಅನಂತಪುರ ರಸ್ತೆ) ಬಳ್ಳಾರಿ ಇವರಿಗೆ ಸಲ್ಲಿಸಬೇಕು.

ಅರ್ಜಿಯ ಜೊತೆ ಮೇಲ್ಕಂಡ ದಾಖಲೆಗಳನ್ನು ಸಲ್ಲಿಸದ, ಅಪೂರ್ಣವಾಗಿರುವ ಮತ್ತು ನಿಗಧಿತ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಮೇಲ್ಕಂಡ ಆದ್ಯತೆ ಹೊರತುಪಡಿಸಿ ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಯಾವುದೇ ವೈಯಕ್ತಿಕ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande