
ವಿಜಯಪುರ, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಹಿನ್ನೆಲೆ ವಿಜಯೋತ್ಸವ ಆಚರಣೆ ಮಾಡಲಾಯಿತು. ವಿಜಯಪುರ ನಗರದ ಗಾಂಧಿಚೌಕ್ ಸರ್ಕಲ್‌ನಲ್ಲಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಭರ್ಜರಿ ವಿಜಯೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಒಬ್ಬರಿಗೊಬ್ಬರು ಸಿಹಿ ತಿನ್ನಿಸಿ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು. ಅಲ್ಲದೇ, ಜೈ ಮೋದಿ, ಜೈ ಬಿಜೆಪಿ ಎಂದು ಕಾರ್ಯಕರ್ತರು ಘೋಷಣೆ ಹಾಕಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande