ಸಾಲುಮರದ ತಿಮ್ಮಕ್ಕ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಬೆಂಗಳೂರು, 14 ನವೆಂಬರ್ (ಹಿ.ಸ.) : ಆ್ಯಂಕರ್ : ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು ಎಂದು ಮುಖ್ಯಮ
Timmakka


ಬೆಂಗಳೂರು, 14 ನವೆಂಬರ್ (ಹಿ.ಸ.) :

ಆ್ಯಂಕರ್ : ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿರುವ ಅವರು, ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು.

ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande