ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮುಳುಗಿದ ಕಾಂಗ್ರೆಸ್‌ ದೋಣಿ : ಪ್ರಹ್ಲಾದ ಜೋಶಿ
ಹುಬ್ಬಳ್ಳಿ, 14 ನವೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್‌ ಪಕ್ಷ ಮುಳುಗುತ್ತಿರುವ ದೋಣಿ. ರಾಹುಲ್‌ ಗಾಂಧಿ ತಮ್ಮೊಂದಿಗೆ ಮಿತ್ರಪಕ್ಷಗಳನ್ನೂ ಮುಳುಗಿಸುತ್ತಿದ್ದಾರೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನ
Joshi


ಹುಬ್ಬಳ್ಳಿ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್‌ ಪಕ್ಷ ಮುಳುಗುತ್ತಿರುವ ದೋಣಿ. ರಾಹುಲ್‌ ಗಾಂಧಿ ತಮ್ಮೊಂದಿಗೆ ಮಿತ್ರಪಕ್ಷಗಳನ್ನೂ ಮುಳುಗಿಸುತ್ತಿದ್ದಾರೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಪಕ್ಷ ದೇಶದೆಲ್ಲೆಡೆ ಮುಳುಗುತ್ತಿದೆ. ಅವರ ʼವೋಟ್‌ಚೋರಿʼ ವೃಥಾ ಆರೋಪದ ತಂತ್ರಗಾರಿಕೆಗೆ ಬಿಹಾರದ ಜನ ಸೊಪ್ಪು ಹಾಕಲಿಲಲ್ಲ ಎಂದು ಪ್ರತಿಕ್ರಿಯಿಸಿದರು.

ಬಿಹಾರದಲ್ಲಿ ಕಾಂಗ್ರೆಸ್‌ ಪಕ್ಷ ಒಂದಂಕಿ ಫಲಿತಾಂಶಕ್ಕೂ ಪರದಾಡುವಂತಾಗಿದೆ. ರಾಹುಲ್‌ ಗಾಂಧಿ ತಮ್ಮ ಮಿತ್ರಪಕ್ಷಗಳ ಅಸ್ಥಿತ್ವವನ್ನೂ ಕಳೆಯುತ್ತಿದ್ದಾರೆ. ರಾಹುಲ್‌ ಗಾಂಧಿ ಯಾವಾಗಲೂ ಪರಮಾಣು ಮತ್ತು ಹೈಡ್ರೋಜನ್ ಬಾಂಬ್‌ಗಳ ಬಗ್ಗೆಯೇ ಮಾತನಾಡುತ್ತಿದ್ದರು. ಅವರು ಈ ಎಲ್ಲಾ ಬಾಂಬ್‌ಗಳನ್ನು ತಮ್ಮದೇ ಪಕ್ಷ ಮತ್ತು ಮಿತ್ರಪಕ್ಷಗಳ ಮೇಲೆ ಸ್ಫೋಟಿಸಿದ್ದಾರೆ ಎಂದು ಜೋಶಿ ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ದೇಶದ ಒಂದು ಸಾಂವಿಧಾನಿಕ ಸಂಸ್ಥೆ ಮತ್ತು ವ್ಯವಸ್ಥೆಯ ಮೇಲೆಯೇ ಗೂಬೆ ಕೂರಿಸುವ ಪ್ರಯತ್ನ ಮಾಡಿದರು. ವೋಟ್‌ ಚೋರಿ, ಮತಯಂತ್ರ ಲೋಪ ಹೀಗೆ ಇಲ್ಲಸಲ್ಲದ ಆರೋಪ ಮಾಡಿ ಮತದಾರರ ದಿಕ್ಕುತಪ್ಪಿಸಲೆತ್ನಿಸಿ ಒಳ್ಳೇ ಫಲ ಕಂಡುಕೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್‌ ಮತ್ತು ಮಹಾ ಘಟಬಂಧನ್‌ನ ಎಲ್ಲಾ ಆರೋಪಗಳನ್ನು ಬಿಹಾರದ ಜನ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಇದು ಅವರ ವೋಟ್‌ ಚೋರಿ ಆರೋಪಕ್ಕೆ ತಕ್ಕ ಪ್ರತ್ಯುತ್ತರವಾಗಿದೆ. ರಾಹುಲ್‌ ಗಾಂಧಿ ಇನ್ನಾದರೂ ಮತದಾರರನ್ನು, ಸಂವಿಧಾನವನ್ನು ಮತ್ತು ಸಂವಿಧಾನಿಕ ಸಂಸ್ಥೆಗಳನ್ನು ಗೌರವಿಸಲಿ ಎಂದು ಜೋಶಿ ಹೇಳಿದ್ದಾರೆ.

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಗೆಲುವು ದಾಖಲಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ನಾಯಕತ್ವಕ್ಕೆ ಮತದಾರರು ನೀಡಿದ ಜನಾದೇಶ. ಇದಕ್ಕಾಗಿ ಬಿಹಾರದ ಜನರಿಗೆ ಧನ್ಯವಾದ ಹೇಳುತ್ತೇನೆ ಎಂದರು ಪ್ರಲ್ಹಾದ ಜೋಶಿ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande