ಕಬ್ಬು ಬೆಳೆಗಾರರ ಹಾನಿ ಭರಿಸಲು ಪ್ರಯತ್ನ : ಸಚಿವ ಶಿವಾನಂದ ಪಾಟೀಲ
ವಿಜಯಪುರ, 14 ನವೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬಿನ ಬೆಲೆ ನಿಗದಿಗಾಗಿ ಹೋರಾಟದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆ ನಡೆದಿದ್ದು ದುರಾಷ್ಟಕರವಾಗಿದ್ದು, ಈ ಘಟನೆಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತ
ಪಾಟೀಲ


ವಿಜಯಪುರ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬಿನ ಬೆಲೆ ನಿಗದಿಗಾಗಿ ಹೋರಾಟದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆ ನಡೆದಿದ್ದು ದುರಾಷ್ಟಕರವಾಗಿದ್ದು, ಈ ಘಟನೆಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಮುಧೋಳದಲ್ಲಿ ಕಬ್ಬು ಬೆಳೆಗಾರ ರೈತ ಬಾಂಧವರನ್ನು ಶುಕ್ರವಾರ ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ 14 ಕಾರ್ಖಾನೆಗಳಲ್ಲಿ 10 ಕಾರ್ಖಾನೆ ಕಬ್ಬು ನುರಿಸುವ ಕಾರ್ಯ ಆರಂಭಿಸಿವೆ. ಇನ್ನು ನಾಲ್ಕು ಕಾರ್ಖಾನೆಯವರು ಆರಂಭಿಸಬೇಕಿತ್ತು. ಅದರಲ್ಲಿ ಸೈದಾಪುರ ಕಾರ್ಖಾನೆವೂ ಒಂದಾಗಿತ್ತು. ವಿಪರ್ಯಾಸವೆಂದರೆ ಈ ಹೋರಾಟದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಗಳು ಬೆಂಕಿಗೆ ತುತ್ತಾಗಿ ಹಾನಿಯಾಗಿವೆ ಎಂದರು.

ರೈತರ ಹೆಸರಿನಲ್ಲಿ ಕಿಡಿಗೇಡಿಗಳು ಈ ದುಷ್ಟಕೆಲಸಮಾಡಿದ್ದಾರೆ.ಅವರ ವಿರುದ್ದ ಕ್ರಮಕೈಗೊಳ್ಳುತ್ತೇವೆ. ಜತೆಗೆ ಈಗಾಗಲೇ ಎಲ್ಲ ಕಾರ್ಖಾನೆಗಳು ಆರಂಭವಾಗಿ 25 ದಿನಗಳಾಗಬೇಕಿತ್ತು. ಈಗ 7ಕೋಟಿ 30 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಬೇಕಾಗಿದೆ. ದಿನದಿಂದ ದಿನಕ್ಕೆ ತಡೆವಾದರೆ ಕಬ್ಬಿನ ಅಂಶ ಕಡಿಮೆಯಾಗಿ ಸಕ್ಕರೆ ಪ್ರಮಾಣ ಕಳೆದುಕೊಳ್ಳುತ್ತದೆ.ಆದ್ದರಿಂದ ರೈತರು ಮುಂದಿನ ಹಂಗಾಮಿಗೆ ತಯಾರಾಗಲು ತಡವಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಕಬ್ಬನ್ನು ಕಾರ್ಖಾನೆಗಳಿಗೆ ಸ್ವಯಂಪ್ರೇರಣೆಯಿಂದ ಕಬ್ಬು ಅರಿಯುವ ಪ್ರಕ್ರಿಯೆಗೆ ಅವಕಾಶ ಮಾಡಿಕೊಡಬೇಕು ಎಂದರು.

ರೈತರ ಬೇಡಿಕೆಗಳು ಮತ್ತು ನೋವು ಸರ್ಕಾರದ ಗಮನದಲ್ಲಿದೆ. ಈ ವಿಷಯದಲ್ಲಿ ಸರ್ಕಾರವು ರೈತರ ಪರವಾಗಿದೆ. ಆದ್ದರಿಂದ ರೈತರು ಸಭೆಯಲ್ಲಿ ರೈತ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚೆ ನಡೆಸಲಾಗಿದೆ. ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿ, ಶೀಘ್ರದಲ್ಲಿಯೇ ಈ ಸಮಸ್ಯೆಗೆ ಸೂಕ್ತ ಪರಿಹಾರ ನೀಡಲು ನಾನು ಬದ್ಧನಾಗಿದ್ದೇನೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande