
ರಾಯಚೂರು, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಕಾನೂನು ಸೇವೆಗಳ ಪ್ರಾಧಿಕಾರವು ರಾಯಚೂರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ವಕೀಲರ ಸಂಘದಿಂದ ನಾಳೆ ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಆರೋಗ್ಯ ಶಿಬಿರ ಮತ್ತು ಕಾನೂನು ಸಾಕ್ಷರತಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಸ್ ಶಶಿಧರ ಶೆಟ್ಟಿ ಅವರು ಹೇಳಿದರು.
ಜಿಲ್ಲಾ ಕೋರ್ಟ ಸಂಕೀರ್ಣದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ದೇವದಾಸಿಯರ ಸಮೀಕ್ಷೆ ಚಾಲ್ತಿಯಲ್ಲಿದೆ. ಅದರಂತೆ ದೇವದಾಸಿ ಪದ್ಧತಿಯನ್ನು ಹೋಗಲಾಡಿಸುವ ಮುಖ್ಯ ಉದ್ದೇಶದೊಂದಿಗೆ ನಾಳೆ ದೇವದಾಸಿಯರ ಸ್ಥಿತಿಗತಿ ವಿಶೇಷ ಉಪನ್ಯಾಸ ಮತ್ತು ನಾನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ನಮ್ಮ ಮಧ್ಯೆ ಇರುವ ಅನೇಕ ಮಹಿಳೆಯರು ಮತ್ತು ವಿಶೇಷವಾಗಿ ದೇವದಾಸಿ ಮಹಿಳೆಯರಿಗೆ ಇದುವರೆಗೆ ಸರಿಯಾದ ಆಧಾರ್ ಕಾರ್ಡ ಇಲ್ಲ. ಕೆಲವರಿಗೆ ಪಡಿತರ ಚೀಟಿ ದೊರೆತಿಲ್ಲ. ಸರ್ಕಾರದ ಯೋಜನೆಗಳ ಲಾಭ ದೊರೆತಿಲ್ಲ. ಕಾನೂನು ಜ್ಞಾನದ ಕೊರತೆಯಿಂದ ಕೆಲವರು ಇದುವರೆಗೆ ಡ್ರೈವಿಂಗ್ ಲೈಸೆನ್ಸ್ ಕೂಡ ಮಾಡಿಸಿಲ್ಲ. ಹೀಗಾಗಿ ನಾವೇ ಜನರ ಬಳಿಗೆ ಹೋಗಿ ಅವರೊಂದಿಗೆ ಮಾತನಾಡಬೇಕು. ಅವರ ಅಹವಾಲುಗಳಿಗೆ ಸ್ಪಂದನೆ ನೀಡಬೇಕು ಎಂದು ಯೋಜಿಸಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ಜಿಲ್ಲೆಯಲ್ಲಿನ ಒಂದು ಗ್ರಾಮವನ್ನಾದರು ವ್ಯಾಜ್ಯ ಮುಕ್ತ ಮಾಡಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.
ಆರೋಗ್ಯ ಇಲಾಖೆಯ ಜೊತೆಗೆ ಸೇರಿ ದೇವದಾಸಿಯರು ಸೇರಿದಂತೆ ಇನ್ನುಳಿದ ಮಹಿಳೆಯರಿಗೆ ಮೆಗಾ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿದ್ದೇವೆ. ಎμÉ್ಟೂ ಜನರಿಗೆ ನಾನಾ ಕಾಯಿಲೆಗಳ ಬಗ್ಗೆ ಅರಿವಿಲ್ಲ. ಜನತೆಗೆ ಜಾಗೃತಿ ಮೂಡಿಸಲು ಅಂದು ಕಾರ್ಯಕ್ರಮದ ಸ್ಥಳದಲ್ಲಿ ಸ್ಟಾಲ್ ಅಳವಡಿಸಿ ಆರೋಗ್ಯ ಸೇರಿದಂತೆ ನಾನಾ ಸರ್ಕಾರಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಇದೆ ವೇಳೆ ಮಹಿಳೆಯರಿಗೆ ಆರೋಗ್ಯ ತಪಾಸಣೆ ದೇವದಾಸಿಯರಿಗೆ ಇರುವ ಸರ್ಕಾರದ ಸೌಲಭ್ಯಗಳು ಮತ್ತು ನಾನಾ ವಿಷಯದ ಮೇಲೆ ಉಪನ್ಯಾಸ ನಡೆಯಲಿದೆ.
ಕಾರ್ಯಕ್ರಮಕ್ಕೆ ಆಗಮಿಸಲು ಅನುಕೂಲವಾಗುವಂತೆ ದೇವದಾಸಿ ಮಹಿಳೆಯರಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅಂದು ಊಟದ ವ್ಯವಸ್ಥೆ ಕೂಡ ಮಾಡಿದ್ದೇವೆ ಎಂದು ಸಮಾರಂಭದ ಕುರಿತು ವಿವರಿಸಿದರು.
ಅಂದು, ಗೌರವಾನ್ವಿತ ಕರ್ನಾಟಕದ ಹೈಕೋರ್ಟನ ಮುಖ್ಯ ನ್ಯಾಯಮೂರ್ತಿಗಳು ಕಾರ್ಯಕ್ರಮ ಉದ್ಘಾಟಿಸುವರು. ಹೈಕೋರ್ಟನ ನ್ಯಾಯಾಧೀಶರು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಪಾಲಕ ಅಧ್ಯಕ್ಷರು,
ರಾಯಚೂರು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರು, ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು, ಹೈಕೋರ್ಟನ ರಿಜಿಸ್ಟರ್ ಜನರಲ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳು, ಬಾರ್ ಅಸೋಸಿಯೇಶನ್ ಅಧ್ಯಕ್ಷರು ಸೇರಿದಂತೆ ಗಣ್ಯ ಮಾನ್ಯರು ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮಾರುತಿ ಶಿ ಬಾಗಡೆ, ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರಾದ ಹೆಚ್ ಎ ಸಾತ್ವಿಕ್, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ನಲವಾಡೆ, ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಲಸುಬ್ರಮಣ್ಯ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್