
ಕೊಪ್ಪಳ, 14 ನವೆಂಬರ್ (ಹಿ.ಸ.)
ಆ್ಯಂಕರ್ : ಕೊಪ್ಪಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ನಾಳೆಯಿಂದ 17 ರ ವರೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನಾಳೆ ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಉಪಸ್ಥಿತರಿರುವರು.
ನ.17 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಳ್ಳಾರಿ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ಉಪಸ್ಥಿತಿ ವಹಿಸುವರು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ಧಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್