ಕುರೇಕುಪ್ಪ ಪುರಸಭೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕುರೇಕುಪ್ಪ, 14 ನವೆಂಬರ್ (ಹಿ.ಸ.) : ಆ್ಯಂಕರ್ : ಕುರೇಕುಪ್ಪ ಪುರಸಭೆ ವತಿಯಿಂದ 2019-20/21ನೇ ಸಾಲಿನ ಎಸ್‍ಸಿಎಸ್‍ಪಿ ಯೋಜನೆಯಡಿ ಬಾಕಿ ಉಳಿದ ಮೊತ್ತಕ್ಕೆ ಅರ್ಹ ಫಲಾನುಭವಿಗಳಿಂದ ಪಕ್ಕ ಮನೆ ನಿರ್ಮಾಣಕ್ಕಾಗಿ, ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಮತ್ತು ಪುರಸಭೆಯ ಪೌರಕಾರ್ಮಿಕರಿಗೆ ನಿ
ಕುರೇಕುಪ್ಪ ಪುರಸಭೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಕುರೇಕುಪ್ಪ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಕುರೇಕುಪ್ಪ ಪುರಸಭೆ ವತಿಯಿಂದ 2019-20/21ನೇ ಸಾಲಿನ ಎಸ್‍ಸಿಎಸ್‍ಪಿ ಯೋಜನೆಯಡಿ ಬಾಕಿ ಉಳಿದ ಮೊತ್ತಕ್ಕೆ ಅರ್ಹ ಫಲಾನುಭವಿಗಳಿಂದ ಪಕ್ಕ ಮನೆ ನಿರ್ಮಾಣಕ್ಕಾಗಿ, ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಮತ್ತು ಪುರಸಭೆಯ ಪೌರಕಾರ್ಮಿಕರಿಗೆ ನಿವೇಶನ ಖರೀದಿಗಾಗಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೇಕಾದ ದಾಖಲೆ :

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತಿಚೀನ ಭಾವಚಿತ್ರÀ, ಮನೆ ತೆರಿಗೆ ರಶೀದಿ, ನಮೂನೆ-03, ನಿವೇಶನ ಖರೀದಿ ಸಂಬಂಧಿಸಿದಂತೆ ಅಗ್ರಿಮೆಂಟ್ ಪತ್ರ ಹಾಗೂ ಇತರೆ ದಾಖಲೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನ.20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿ ಅಥವಾ ದೂ. 08395-295601 ಗೆ ಸಂಪರ್ಕಿಸಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande