ಕುರುಗೋಡು : ಬೀದಿ ನಾಯಿಗಳು ವಾಸವಿರುವ ಮಾಹಿತಿ ನೀಡಲು ಸೂಚನೆ
ಕುರುಗೋಡು, 14 ನವೆಂಬರ್ (ಹಿ.ಸ.) : ಆ್ಯಂಕರ್ : ಕುರುಗೋಡು ಪುರಸಭೆ ಮತ್ತು ಕುರೇಕುಪ್ಪ ಪುರಸಭೆ ವ್ಯಾಪ್ತಿಗೆ ಬರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂ
ಕುರುಗೋಡು : ಬೀದಿ ನಾಯಿಗಳು ವಾಸವಿರುವ ಮಾಹಿತಿ ನೀಡಲು ಸೂಚನೆ


ಕುರುಗೋಡು, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಕುರುಗೋಡು ಪುರಸಭೆ ಮತ್ತು ಕುರೇಕುಪ್ಪ ಪುರಸಭೆ ವ್ಯಾಪ್ತಿಗೆ ಬರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ, ಪರಿಶೀಲಿಸಿ ಬೀದಿ ನಾಯಿಗಳ ಸಂಖ್ಯೆಯ ಮಾಹಿತಿಯನ್ನು ಕುರುಗೋಡು ಪುರಸಭೆ ಮತ್ತು ಕುರೇಕುಪ್ಪ ಪುರಸಭೆ ಕಚೇರಿಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೂಚನೆ : ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು.

ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅದನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು.

ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande