

ಬಳ್ಳಾರಿ, 14 ನವೆಂಬರ್ (ಹಿ.ಸ.) :
ಆ್ಯಂಕರ್ : ನಮ್ಮ ಸುತ್ತ-ಮುತ್ತಲಿನ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸುವ ಮೂಲಕ ಅದರ ಜವಾಬ್ದಾರಿಯನ್ನು ತಿಳಿದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಡಾ. ಸಿದ್ದೇಶ್ವರ ಬಾಬು ಅವರು ತಿಳಿಸಿದ್ದಾರೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ (ಆರ್‍ಎಎಂಪಿ) ಯೋಜನೆಯಡಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಸರ ಮತ್ತು ಸಾಮಾಜಿಕ ನಿರ್ವಹಣೆ (ಇಎಸ್‍ಎಂ) ಯೋಜನೆಯ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಸೋಮಶೇಖರ್.ಬಿ., ಉದ್ಯೋಗ ಮತ್ತು ಜಿಲ್ಲಾ ಕೌಶಲ್ಯ ಅಧಿಕಾರಿ ಹಟ್ಟೆಪ್ಪ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಹಾಂತೇಶ ಕಂಚಿಮಠ, ಜೆಎಸ್‍ಡಬ್ಲ್ಯೂ ಸ್ಟೀಲ್‍ನ ಪರಿಸರ ಅಧಿಕಾರಿ ಡಾ.ಜಯಪ್ರಕಾಶ್, ಶ್ರೀಮೇಧಾ ಶಿಕ್ಷಣ ಸಮೂಹ ಸಂಸ್ಥೆಯ ಪ್ರಾಂಶುಪಾಲ ಡಾ.ರಾಮ್ ಕಿರಣ್.ಕೆ., ಬಿಹೆಚ್‍ಕ್ಯೂ ಪ್ರಾಜೆಕ್ಟ್ಸ್ ಉಪಾಧ್ಯಕ್ಷ ಉಮಾ ಶಂಕರ್, ಜೆಎಸ್‍ಡಬ್ಲ್ಯೂ ಸ್ಟೀಲ್ ತರಬೇತಿ ಅಧಿಕಾರಿ ಸುದರ್ಶನ ಹೆಚ್.ಆರ್., ಸಿಡಾಕ್ ನ ವಿನೋದ್ ಕುಮಾರ್, ಆರ್‍ಸೆಟ್‍ಇ ತರಬೇತಿ ಅಧಿಕಾರಿ ಜಡೆಪ್ಪ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್