ಸಚಿವರಾದ ಎನ್.ಎಸ್.ಬೋಸರಾಜು ರಾಯಚೂರು ಜಿಲ್ಲಾ ಪ್ರವಾಸ
ರಾಯಚೂರು, 14 ನವೆಂಬರ್ (ಹಿ.ಸ.) : ಆ್ಯಂಕರ್ : ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ನವೆಂಬರ್ 15 ಹಾಗೂ 16 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನವೆಂಬರ್ 15ರ ಬೆಳಿಗ್ಗೆ 10ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ 72ನೇ ಅ
ಸಚಿವರಾದ ಎನ್.ಎಸ್.ಬೋಸರಾಜು ರಾಯಚೂರು ಜಿಲ್ಲಾ ಪ್ರವಾಸ


ರಾಯಚೂರು, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ನವೆಂಬರ್ 15 ಹಾಗೂ 16 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನವೆಂಬರ್ 15ರ ಬೆಳಿಗ್ಗೆ 10ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ಮಾನ್ವಿಗೆ ಪ್ರಯಾಣ ಬೆಳೆಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಸಂಜೆ 4.30ಕ್ಕೆ ನಡೆಯುವ ರಾಯಚೂರು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ನವೆಂಬರ್ 16ರ ರಾತ್ರಿ 9.40ಕ್ಕೆ ರಾಯಚೂರಿನ ಎಸ್.ಬಿ.ಸಿ. ರಾಜಧಾನಿ ಎಕ್ಸ್ಪ್ಸೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande