
ನವದೆಹಲಿ, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಆರಂಭಿಕ ಹಂತದಲ್ಲೇ ಎನ್‌ಡಿಎ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನಗಳತ್ತ ಸಾಗುತ್ತಿದೆ. ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ.
ಫಲಿತಾಂಶಗಳು ಪಕ್ಷದ ಪರವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ, ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಆರಂಭವಾಗಿದೆ. ಕಚೇರಿಯಲ್ಲಿ ಸಟ್ಟು ಪರಾಠ, ಜಿಲೇಬಿ, ಲಿಟ್ಟಿ-ಚೋಖಾ ತಯಾರಿಸುವ ಕಾರ್ಯ ಭರದಿಂದ ಸಾಗಿದೆ.
ಆರಂಭಿಕ ಫಲಿತಾಂಶಗಳ ಬಗ್ಗೆ ಬಿಜೆಪಿ ನಾಯಕ ಶಹನವಾಜ್ ಹುಸೇನ್ ಪ್ರತಿಕ್ರಿಯೆ ನೀಡಿ, ನಾವು ಭಾರಿ ಬಹುಮತದಿಂದ ಸರ್ಕಾರ ರಚಿಸುತ್ತಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa