
ಹುಬ್ಬಳ್ಳಿ, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಪೊಲೀಸರು ನಿತ್ಯ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ. ಕ್ರೀಡೆಯಿಂದ ಮನಸ್ಸು ಉಲ್ಲಾಸಗೊಳ್ಳುತ್ತದೆ. ಕ್ರೀಡೆಯಿಂದ ಉತ್ಸಾಹದಿಂದ ಕೆಲಸ ಕಾರ್ಯನಿರ್ವಹಿಸಲು ಸಹಾಯಕವಾಗಲಿದೆ. ಪೊಲೀಸರು ದೈಹಿಕ, ಮಾನಸಿಕ ಸದೃಢತೆಗೆ ಪ್ರಾಶಸ್ತ್ಯ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಹೇಳಿದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೊಲೀಸರು ಆರೋಗ್ಯದ ಕಡೆಗೆ ಗಮನಹರಿಸಬೇಕು. ಪೊಲೀಸರಲ್ಲಿ ಹೃದಯದ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕಾಯಿಲೆಗಳನ್ನು ತಡೆಗಟ್ಟಲು ಕ್ರೀಡೆ ಸಹಾಯಕವಾಗುವುದು. ನಿಮ್ಮ ಹಿರಿಯ ಅಧಿಕಾರಿಗಳಂತೆ ಕಿರಿಯರು ಉತ್ತಮ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಅವರು ನಮಗೆ ಮಾದರಿಯಾಗಿದ್ದಾರೆ. ನೀವು ಕೂಡ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa