ನಾಳೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಡೆದುಬಂದ ದಾರಿ ವಿಶೇಷ ಉಪನ್ಯಾಸ
ಬೆಂಗಳೂರು, 14 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟೋತ್ಥಾನ ಸಾಹಿತ್ಯ, ಬೆಂಗಳೂರಿನಲ್ಲಿ ನಡೆಯುತ್ತಿರುವ 5ನೇ ಕನ್ನಡ ಪುಸ್ತಕ ಹಬ್ಬದ ಅಂಗವಾಗಿ ನಾಳೆ ಶನಿವಾರ “ನೂರು ವರುಷ; ಸಾವಿರದ ಕೆಲಸ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಡೆದುಬಂದ ದಾರಿ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ
Rss


ಬೆಂಗಳೂರು, 14 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟೋತ್ಥಾನ ಸಾಹಿತ್ಯ, ಬೆಂಗಳೂರಿನಲ್ಲಿ ನಡೆಯುತ್ತಿರುವ 5ನೇ ಕನ್ನಡ ಪುಸ್ತಕ ಹಬ್ಬದ ಅಂಗವಾಗಿ ನಾಳೆ ಶನಿವಾರ “ನೂರು ವರುಷ; ಸಾವಿರದ ಕೆಲಸ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಡೆದುಬಂದ ದಾರಿ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ಕೆಂಪೇಗೌಡನಗರದ ಕೇಶವಶಿಲ್ಪ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾದ ನಾ. ತಿಪ್ಪೇಸ್ವಾಮಿ ಉಪನ್ಯಾಸ ನೀಡುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅದೈತ್‌ ಮೋಟಾರ್ಸ್ ಲಿಮಿಟೆಡ್‌ನ ಸ್ಥಾಪಕರು ಮತ್ತು ಮ್ಯಾನೇಜಿಂಗ್ ಡೈರೆಕ್ಟರ್‌ ಎಸ್. ವಿ. ಸುಬ್ರಹ್ಮಣ್ಯ ಗುಪ್ತ ವಹಿಸಲಿದ್ದಾರೆ.

ಕನ್ನಡ ಪುಸ್ತಕ ಹಬ್ಬದ ಭಾಗವಾಗಿ ನಡೆಯುತ್ತಿರುವ ಈ ವಿಶೇಷ ಉಪನ್ಯಾಸದಲ್ಲಿ ಸಂಘದ ಶತಮಾನ ಪಯಣ, ಸಮಾಜಮುಖಿ ಕಾರ್ಯಗಳು ಹಾಗೂ ಸಂಘದ ವಿಸ್ತಾರವಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದೆ.

ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು, ಓದುಗರು ಮತ್ತು ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಷ್ಟೋತ್ಥಾನ ಸಾಹಿತ್ಯ ಪ್ರತಿಷ್ಠಾನ ವಿನಂತಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande