ಕಬ್ಬಿನ ದರ ವಿವಾದ ; ಮೂರು ದಿನ ನಿಷೇಧಾಜ್ಞೆ ಜಾರಿ
ವಿಜಯಪುರ, 14 ನವೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಮೀರ್​ವಾಡಿಯ ಗೋದಾವರಿ ಕಾರ್ಖಾನೆ ಆವರಣ ಅಕ್ಷರಶಃ ರಣರಂಗವಾಗಿತ್ತು. 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹೋರಾಟ ತೀವ್ರ ಸ್ವರೂಪ ಪಡ
ಕಬ್ಬು


ವಿಜಯಪುರ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಮೀರ್​ವಾಡಿಯ ಗೋದಾವರಿ ಕಾರ್ಖಾನೆ ಆವರಣ ಅಕ್ಷರಶಃ ರಣರಂಗವಾಗಿತ್ತು. 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಜಮಖಂಡಿ, ರಬಕವಿ-ಬನಹಟ್ಟಿ ಮತ್ತು ಮುಧೋಳ ತಾಲೂಕುಗಳಾದ್ಯಂತ ಮೂರು ದಿನಗಳ‌ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಘಟನೆ ಬಗ್ಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಪ್ರತಿಕ್ರಿಯಿಸಿದ್ದು, ಈಗಾಗಲೇ ಡಿಸಿ ಅವರು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರ ಜತೆ ಮೂರರಿಂದ ನಾಲ್ಕು ಬಾರಿ ಸಭೆ ಮಾಡಿದ್ದಾರೆ. ನಾನು ಚರ್ಚೆ ಮಾಡಿ ಬಗೆಹರಿಸುವ ಪ್ರಯತ್ನ ಮಾಡಿದ್ದೇನೆ. ಕೆಲವು ಕಿಡಿಗೇಡಿಗಳು ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಿದ್ದಾರೆ. ದಯವಿಟ್ಟು ಯಾರು ಕೂಡ ತಾಳ್ಮೆ ಕಳೆದುಕೊಳ್ಳಬಾರದು. ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದೇವೆ. ನಾನೂ ರೈತನ ಮಗ, ನನಗೂ ರೈತರ ಕಷ್ಟಗಳು ಗೊತ್ತಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande