
ಹೊಸಪೇಟೆ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಲ್ಲಿನ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ನಗರಸಭೆ ಪೌರಯುಕ್ತರಾದ ಶಿವಕುಮಾರ ಯರಗುಡಿ ತಿಳಿಸಿದ್ದಾರೆ.
ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025 ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಸಂಖ್ಯೆಯನ್ನು ಲೆಕ್ಕ ಮಾಡಿ ಪೌರಾಯುಕ್ತರಿಗೆ ತಿಳಿಸುವುದು.
ಹೊಸಪೇಟೆ ನಗರಸಭೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.
ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್