
ಹೊಸಪೇಟೆ, 15 ನವೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಧೀಕರಣದಲ್ಲಿ ಎರಡು ವರ್ಷಗಳ ತರಬೇತಿ ಭತ್ಯೆ (ಕಾನೂನು ಪದವೀಧರರಿಗೆ ಸ್ಟೈಫಂಡ್) ನೀಡುವ ಸಲುವಾಗಿ ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ವೈ.ಎ.ಕಾಳೆ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ನವೆಂಬರ್.23 ರಂದು ಕೊನೆಯ ದಿನವಾಗಿದೆ. ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಸಿ ನಿಗದಿತ ಅವಧಿಯೊಳಗೆ ಪೂರಕ ದಾಖಲಾತಿಗಳೊಂದಿಗೆ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಒಂದು ಪ್ರತಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆಯಬೇಕೆಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್