ಪ.ಜಾತಿ ಮತ್ತು ಪ. ಪಂಗಡದ ಅರ್ಹ ಅಭ್ಯರ್ಥಿಗಳಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಧಾರವಾಡ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸಿ ಮಾರ್ಗದರ್ಶನ ತರಬೇತಿ: ಧಾರ
ಪ.ಜಾತಿ ಮತ್ತು ಪ. ಪಂಗಡದ ಅರ್ಹ ಅಭ್ಯರ್ಥಿಗಳಿಂದ ತರಬೇತಿಗಾಗಿ ಅರ್ಜಿ ಆಹ್ವಾನ


ಧಾರವಾಡ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರವಾಸಿ ಮಾರ್ಗದರ್ಶನ ತರಬೇತಿ: ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಪ್ರವಾಸಿ ಮಾರ್ಗದರ್ಶನ ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದಿ ತರಬೇತಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 8ನೇ ಮತ್ತು 10ನೇ ತರಗತಿ ಉತ್ತೀರ್ಣರಾದ 20 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದ ವಿಭಾಗದಲ್ಲಿ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವದು.

ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 20, 2025 ರೊಳಗಾಗಿ ಧಾರವಾಡ ಪ್ರವಾಸೋದ್ಯಮ ಇಲಾಖೆಯ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande