ತುಂಗಭದ್ರಾ ಜಲಾಶಯ ವ್ಯಾಪ್ತಿಯ ರೈತರಿಗೆ ಎರಡನೇ ಬೆಳೆಗೆ ನೀರು ಬಿಡುಗಡೆ ಮಾಡಲು ಬಿಜೆಪಿ ಒತ್ತಾಯ
ಬೆಂಗಳೂರು, 15 ನವೆಂಬರ್ (ಹಿ.ಸ.) : ಆ್ಯಂಕರ್ : ತುಂಗಭದ್ರಾ ಜಲಾಶಯ ವ್ಯಾಪ್ತಿಯ ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೆ ನೀರು ಬಿಡುಗಡೆ ಮಾಡಲು ರೈತರ ಬೇಡಿಕೆಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಇನ್ನೂ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವ ಹಿನ್ನೆಲೆಯ
Bjp meeting


ಬೆಂಗಳೂರು, 15 ನವೆಂಬರ್ (ಹಿ.ಸ.) :

ಆ್ಯಂಕರ್ : ತುಂಗಭದ್ರಾ ಜಲಾಶಯ ವ್ಯಾಪ್ತಿಯ ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೆ ನೀರು ಬಿಡುಗಡೆ ಮಾಡಲು ರೈತರ ಬೇಡಿಕೆಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಇನ್ನೂ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಹೋರಾಟದ ರೂಪುರೇಷೆ ಕುರಿತು ಮಹತ್ವದ ಸಭೆ ನಡೆಯಿತು.

ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕಾಗಿ ಹೋರಾಟದ ಮುಂದಿನ ಹಂತಗಳಾದ, ರೈತರೊಂದಿಗೆ ನೇರವಾಗಿ ಸಂವಹನ ಬೆಳೆಸುವ ಕಾರ್ಯಕ್ರಮಗಳು ಹಾಗೂ ಜಿಲ್ಲಾವಾರು ಪ್ರತಿಭಟನೆಗಳ ಬಗ್ಗೆ ಚರ್ಚಿಸಲಾಗಿದ್ದು, ತಕ್ಷಣದ ಕ್ರಮ ಕೈಗೊಳ್ಳದಿದ್ದರೆ ತೀವ್ರವಾದ ಹೋರಾಟ ಕೈಗೊಳ್ಳುವುದಾಗಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಸೇರಿದಂತೆ ಹಿರಿಯ ನಾಯಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande