ಭಗವಾನ್ ಬಿರ್ಸಾ ಮುಂಡಾ ಜಯಂತಿ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವ ನಮನ
ನವದೆಹಲಿ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಬುಡಕಟ್ಟು ನಾಯಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ''ಧರ್ತಿ ಅಬಾ'' ಎಂದೇ ಜನಮನಗಳಲ್ಲಿ ನೆಲೆಸಿರುವ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಮಾ
Amit sha


ನವದೆಹಲಿ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಬುಡಕಟ್ಟು ನಾಯಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು 'ಧರ್ತಿ ಅಬಾ' ಎಂದೇ ಜನಮನಗಳಲ್ಲಿ ನೆಲೆಸಿರುವ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ತಮ್ಮ ಸಂದೇಶ ಹಂಚಿಕೊಂಡಿರುವ ಅವರು, “ಬಿರ್ಸಾ ಮುಂಡಾ ಬುಡಕಟ್ಟು ಸಮುದಾಯವನ್ನು ತಮ್ಮ ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸಲು ಪ್ರೇರೇಪಿಸಿದರು. ಬ್ರಿಟಿಷರ ಶೋಷಣೆಯ ವಿರುದ್ಧ ‘ಉಲ್ಗುಲಾನ್’ ಎಂಬ ಐತಿಹಾಸಿಕ ಚಳುವಳಿಯನ್ನು ಮುನ್ನಡೆಸಿದರು ಎಂದು ಸ್ಮರಿಸಿದ್ದಾರೆ.

ಬಿರ್ಸಾ ಮುಂಡಾ ಅವರ ಜನ್ಮ ದಿನವನ್ನು ‘ಬುಡಕಟ್ಟು ಹೆಮ್ಮೆಯ ದಿನ’ವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ನಿರ್ಧಾರ, ಅವರ ಜೀವನ ಸಮರಕ್ಕೆ ರಾಷ್ಟ್ರೀಯ ಗೌರವದ ಸೂಚನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande