
ಬೆಂಗಳೂರು, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವ ಸಂತೋಷ ಲಾಡ್, ಕಂಪನಿಗಳ ಕಾರ್ಮಿಕರ ಸಮಸ್ಯೆಗಳ ಕುರಿತು ವಿಕಾಸ ಸೌಧದಲ್ಲಿ ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ವೆರ್ಗಾ ಅಟ್ಯಾಚ್‌ಮೆಂಟ್ ನೌಕರರ ಸಮಸ್ಯೆ ಚರ್ಚೆ:
ಮಾಲೂರು ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟ್ಯಾಚ್‌ಮೆಂಟ್ ಕಂಪನಿಯ ಆಡಳಿತ ಮಂಡಳಿ ಹಾಗೂ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಸಭೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಸಿನ್, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಕಾರ್ಖಾನೆಗಳು ಮತ್ತು ಬಾಯ್ಲರುಗಳ ಇಲಾಖೆ ನಿರ್ದೇಶಕ ಶ್ರೀನಿವಾಸ್, ಕಾರ್ಮಿಕ ಅಧಿಕಾರಿ ಕಿರಣ್, ಕಾರ್ಮಿಕ ನಿರೀಕ್ಷಕ ರೇಣುಕಾ ಪ್ರಸಾದ್, ಕಂಪನಿಯ ಹೆಚ್ ಆರ್ ಮ್ಯಾನೇಜರ್ ವಿಠಲ್ ರೈರವರು, ನೌಕರರ ಸಂಘದ ಅಧ್ಯಕ್ಷ ಗೋಪಾಲಗೌಡ ಉಪಸ್ಥಿತರಿದ್ದರು.
ಎಂವೀ ಫೋಟೋ ವೋಲ್ಟ್ರಾಯಿಕ್ ಸೋಲಾರ್ ಕಂಪನಿ ನೌಕರರ ಸಮಸ್ಯೆ ಚರ್ಚೆ:
ಎಂವೀ ಫೋಟೋ ವೋಲ್ಟ್ರಾಯಿಕ್ ಸೋಲಾರ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಆಡಳಿತ ವರ್ಗ ಮತ್ತು ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರು ಸಭೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಸಿನ್, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಕಾರ್ಖಾನೆಗಳು ಮತ್ತು ಬಾಯ್ಲರುಗಳ ಇಲಾಖೆ ನಿರ್ದೇಶಕ ಶ್ರೀನಿವಾಸ್, ಕಾರ್ಮಿಕ ಅಧಿಕಾರಿ ಕಿರಣ್, ಕಾರ್ಮಿಕ ನಿರೀಕ್ಷಕ ರೇಣುಕಾ ಪ್ರಸಾದ್, ಕಂಪನಿಯ ಕಾನೂನು ಸಲಹೆಗಾರ ಆನಂದ್ ಮತ್ತು ಕಂಪನಿಯ ನೌಕರರ ಸಂಘದ ಭೀಮಪ್ಪ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa