ಕೋಲ್ಕತ್ತಾದ ಬಾರಾ ಬಜಾರ್‌ನಲ್ಲಿ ಭಾರಿ ಬೆಂಕಿ ಅವಘಡ
ಕೋಲ್ಕತ್ತಾ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಜನನಿಬಿಡ ವಾಣಿಜ್ಯ ವಲಯಗಳಲ್ಲಿೊಂದಾದ ಬಾರಾ ಬಜಾರ್‌ನಲ್ಲಿ ಶನಿವಾರ ಮುಂಜಾನೆ ಭಾರಿ ಅಗ್ನಿ ದುರಂತ ಸಂಭವಿಸಿದೆ. ಎಜ್ರಾ ಸ್ಟ್ರೀಟ್‌ನಲ್ಲಿರುವ ವಿದ್ಯುತ್ ಸರಕುಗಳ ಅಂಗಡಿಯೊಂದರಲ್ಲಿ ಬೆಳಿಗ್ಗೆ 5 ಗಂಟೆ ವೇಳೆಗೆ
Fire


ಕೋಲ್ಕತ್ತಾ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಜನನಿಬಿಡ ವಾಣಿಜ್ಯ ವಲಯಗಳಲ್ಲಿೊಂದಾದ ಬಾರಾ ಬಜಾರ್‌ನಲ್ಲಿ ಶನಿವಾರ ಮುಂಜಾನೆ ಭಾರಿ ಅಗ್ನಿ ದುರಂತ ಸಂಭವಿಸಿದೆ.

ಎಜ್ರಾ ಸ್ಟ್ರೀಟ್‌ನಲ್ಲಿರುವ ವಿದ್ಯುತ್ ಸರಕುಗಳ ಅಂಗಡಿಯೊಂದರಲ್ಲಿ ಬೆಳಿಗ್ಗೆ 5 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹತ್ತಿರದ ಅಂಗಡಿಗಳು, ಕಟ್ಟಡಗಳು ಮತ್ತು ಗೋದಾಮುಗಳಿಗೆ ವ್ಯಾಪಿಸಿದೆ.

21 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ಪ್ಲಾಸ್ಟಿಕ್ ಮತ್ತು ಕೇಬಲ್‌ಗಳಂತಹ ಸುಡುವ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿದ್ದ ಕಾರಣ ಬೆಂಕಿ ವ್ಯಾಪಕವಾಗಿ ಹರಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಡೀ ಪ್ರದೇಶವನ್ನು ದಟ್ಟ ಹೊಗೆ ಆವರಿಸಿದ್ದು, ಅಪಾಯದ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶಕ್ಕೆ ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ. ವ್ಯಾಪಾರಸ್ಥರು ಅಪಾರ ನಷ್ಟಕ್ಕೆ ಗುರಿಯಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸರಕುಗಳು ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ.

ಘಟನೆಗೆ ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ತಿಳಿದು ಬಂದಿದೆ.

ಅಗ್ನಿ ಅವಘಡದ ನಿಖರ ಕಾರಣ ಪತ್ತೆ ಮಾಡಲು ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಯ ಜಂಟಿ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande